- Advertisement -
![]()
- Advertisement -
ಚಿಕ್ಕಮಗಳೂರು : ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ. ಗಣೇಶ್ (38) ಕೊಲೆಯಾದ ದುರ್ದೈವಿ.
ನಿನ್ನೆ ರಾತ್ರಿ 10.30ರ ವೇಳೆಗೆ ಸಖರಾಯಪಟ್ಟಣದಬಾರ್ ಬಳಿ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಬಾರ್ ಬಳಿ ಗಲಾಟೆಯಾದ ಅರ್ಧ ಗಂಟೆ ಬಳಿಕ ಮಠದ ಬಳಿ ಗಲಾಟೆಯಾಗಿ ಕೊಲೆ ನಡೆದಿದೆ. ಎದುರಾಳಿ ಗುಂಪಿನ ಇಬ್ಬರ ತಲೆಗೂ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೊಲೆಯಾದ ಗಣೇಶ್ ಮುಂಬರೋ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಖರಾಯಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಬಗ್ಗೆ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


