Tuesday, May 7, 2024
Homeತಾಜಾ ಸುದ್ದಿಗ್ರಾ.ಪಂ ಚುನಾವಣಾ ಮತ ಎಣಿಕೆ: ನಾಳೆ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ

ಗ್ರಾ.ಪಂ ಚುನಾವಣಾ ಮತ ಎಣಿಕೆ: ನಾಳೆ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ

spot_img
- Advertisement -
- Advertisement -

ಬೆಂಗಳೂರು: ಎರಡು ಹಂತದ ಗ್ರಾಮ ಪಂಚಾಯಿತಿಚುನಾವಣೆಗೆ ಮತದಾನ ಯಶಸ್ವಿಯಾಗಿ ನಡೆದಿದ್ದು,ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಗಳಲ್ಲಿ ಭದ್ರವಾಗಿದೆ.ಗ್ರಾಮೀಣ ಭಾಗದಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿ ನಡೆಯುತ್ತಿದ್ದು, ಫ‌ಲಿತಾಂಶ ಹೊರ ಬೀಳಲು ಕೆಲವೇ ಗಂಟೆಗಳು ಬಾಕಿ ಉಳಿದಿವೆ.

ಈ ಹಿನ್ನಲೆಯಲ್ಲಿ ಮತ ಎಣಿಕೆ ಕಾರ್ಯವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಅಬಕಾರಿ ಕಾಯ್ದೆ 1965ರ ಕಲಂ 21(1)ರಡಿಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಎಲ್ಲ ಜಿಲ್ಲೆಯಾದ್ಯಂತ ಡಿಸೆಂಬರ್ 30 ರಂದು ಬೆಳಗ್ಗೆ 6 ಗಂಟೆಯಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ರೀತಿಯ ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಮತ ಪೆಟ್ಟಿಗೆ ಇಟ್ಟಿರುವ ಸ್ಥಳಗಳಿಗೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

- Advertisement -
spot_img

Latest News

error: Content is protected !!