Sunday, May 5, 2024
Homeತಾಜಾ ಸುದ್ದಿಗ್ರಾ.ಪಂ.‌ ಗ್ರಂಥಾಲಯ ಮೇಲ್ವಿಚಾರಕರ ಗೌರವ ಧನ 5 ಸಾವಿರ ರೂ. ಹೆಚ್ಚಳ: ಕೆಲಸದ ವೇಳೆ ವಿಸ್ತರಣೆ...

ಗ್ರಾ.ಪಂ.‌ ಗ್ರಂಥಾಲಯ ಮೇಲ್ವಿಚಾರಕರ ಗೌರವ ಧನ 5 ಸಾವಿರ ರೂ. ಹೆಚ್ಚಳ: ಕೆಲಸದ ವೇಳೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ

spot_img
- Advertisement -
- Advertisement -

ಬೆಂಗಳೂರು: ಗ್ರಾಮ ಪಂಚಾಯತ್ ಗ್ರಂಥಾಲಯಗಳಿಗೆ ರಾಜ್ಯ ಸರ್ಕಾರ ಮರು ಮರು ನಾಮಕರಣ ಮಾಡಿದೆ. ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಲಾಗಿದೆ.

ಇದರ ಜೊತೆಗೆ ಗ್ರಂಥಾಲಯ ಮೇಲ್ವಿಚಾರಕರ ಗೌರವಧನ 5 ಸಾವಿರ ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಏಳು ಸಾವಿರ ರೂಪಾಯಿಗಳಿಂದ ಹನ್ನೆರಡು ಸಾವಿರ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ.

ಈ ಮಧ್ಯೆ ರಾಜ್ಯ ಸರ್ಕಾರದಿಂದ ರಜಾ ದಿನಗಳು ಎಂದು ಘೋಷಿಸಲ್ಪಟ್ಟ ರಜಾ ದಿನಗಳು, ಪ್ರತಿ ತಿಂಗಳ ಎರಡನೇ ಮಂಗಳವಾರ ಹಾಗೂ ಸೋಮವಾರ ವಾರದ ರಜೆ ಹೊರತುಪಡಿಸಿ ಗ್ರಂಥಾಲಯದ ಕೆಲಸದ ವೇಳೆಯನ್ನು ವಿಸ್ತರಿಸಲಾಗಿದೆ‌.

ಪ್ರಸ್ತುತ ಇರುವ ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ ಮತ್ತು ಭಾನುವಾರಗಳಂದು 4 ಗಂಟೆಯಿಂದ 6 ಗಂಟೆಯವರೆಗೆ ಬದಲಾಗಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ.

ಶನಿವಾರ ಬೆಳಗ್ಗೆ ಹತ್ತು ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಮತ್ತು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿಗದಿಪಡಿಸಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ

- Advertisement -
spot_img

Latest News

error: Content is protected !!