Sunday, June 7, 2026
Homeಕರಾವಳಿಬಿಗ್ ಬಾಸ್ ರಿಯಾಲಿಟಿ ಶೋ ವಿನ್ನರ್ ರೂಪೇಶ್ ಶೆಟ್ಟಿಗೆ ಮಂಗಳೂರಿನಲ್ಲಿ ಅದ್ಧೂರಿ ಸ್ವಾಗತ

ಬಿಗ್ ಬಾಸ್ ರಿಯಾಲಿಟಿ ಶೋ ವಿನ್ನರ್ ರೂಪೇಶ್ ಶೆಟ್ಟಿಗೆ ಮಂಗಳೂರಿನಲ್ಲಿ ಅದ್ಧೂರಿ ಸ್ವಾಗತ

- Advertisement -
- Advertisement -

ಮಂಗಳೂರು: ಕನ್ನಡ ಕಿರುತೆರೆ ರಿಯಾಲಿಟಿ ಶೋ ಬಿಗ್ ಬಾಸ್ 9 ರ ವಿಜೇತ ರೂಪೇಶ್ ಶೆಟ್ಟಿ ಇಂದು ಮಂಗಳೂರಿಗೆ ಆಗಮಿಸಿದ್ದಾರೆ.ಬಿಗ್ ಬಾಸ್ ವಿನ್ನರ್ ಆದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ರೂಪೇಶ್ ಶೆಟ್ಟಿಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.

ಮಂಗಳೂರು ನಗರದ ನೆಹರು ಮೈದಾನದಿಂದ ಕುತ್ತಾರು ಕೊರಗಜ್ಜನ ಕ್ಷೇತ್ರದವರೆಗೆ ಮೆರವಣಿಗೆ ನಡೆಸಲಾಗಿದೆ.‌ ತೆರೆದ ವಾಹನದಲ್ಲಿ ನಡೆದ
ಮೆರವಣಿಗೆಯಲ್ಲಿ ರೂಪೇಶ್ ಶೆಟ್ಟಿ ಅಭಿಮಾನಿಗಳು ಭಾಗಿಯಾಗಿದ್ದರು.‌

ಮೆರವಣಿಗೆಯಲ್ಲಿ ಹುಲಿ ಕುಣಿತ ತಂಡ ಮತ್ತು ಚೆಂಡೆ ವಾದನ ತಂಡಗಳು ಪಾಲ್ಗೊಂಡಿದ್ದು, ರೂಪೇಶ್ ಶೆಟ್ಟಿ ಜೊತೆ ಅಭಿಮಾನಿಗಳು ಸೆಲ್ಫಿ ತೆಗೆಸಿಕೊಂಡರು.‌

ಕಳೆದ ಡಿಸೆಂಬರ್ 31 ರಂದು ಬಿಗ್ ಬಾಸ್ ರಿಯಾಲಿಟಿ ಶೋ ನ ಗ್ರ್ಯಾಂಡ್ ಫಿನಾಲೆ ನಡೆದಿತ್ತು. ಫಿನಾಲೆಯಲ್ಲಿ ರೂಪೇಶ್ ಶೆಟ್ಟಿ ವಿನ್ನರ್ ಆಗಿದ್ದರೆ, ರಾಕೇಶ್ ಅಡಿಗ ರನ್ನರ್ ಅಪ್ ಆಗಿದ್ದರು.

- Advertisement -

Latest News

error: Content is protected !!