Thursday, July 2, 2026
Homeಅಪರಾಧಶಿವಮೊಗ್ಗದಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗನ ಬಂಧನ: ಪೊಲೀಸರ ಮೇಲಿನ ಹಲ್ಲೆ ವೇಳೆ ಆರೋಪಿಗೆ ಗುಂಡೇಟು!

ಶಿವಮೊಗ್ಗದಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗನ ಬಂಧನ: ಪೊಲೀಸರ ಮೇಲಿನ ಹಲ್ಲೆ ವೇಳೆ ಆರೋಪಿಗೆ ಗುಂಡೇಟು!

- Advertisement -
- Advertisement -

ಶಿವಮೊಗ್ಗದ ಅಣ್ಣಾ ನಗರದ ಆನಂದರಾವ್ ಬಡಾವಣೆಯಲ್ಲಿ ಬುಧವಾರ ಸಂಜೆ ಸುಶೀಲಮ್ಮ (65) ಎಂಬ ವೃದ್ಧೆಯನ್ನು ಅವರ ಮೊಮ್ಮಗ ಕಿಶೋರ್ (26) ಭೀಕರವಾಗಿ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದನು.

ಈ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗಾಗಿ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ತೀವ್ರ ಕಾರ್ಯಾಚರಣೆ ಕೈಗೊಂಡಿದ್ದರು. ಈ ನಡುವೆ, ಆರೋಪಿಯು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಾಜಪೇಯಿ ಬಡಾವಣೆಯಲ್ಲಿದ್ದಾನೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ತಕ್ಷಣ ಸ್ಥಳಕ್ಕೆ ಧಾವಿಸಿ ಆತನನ್ನು ಬಂಧಿಸಲು ಯತ್ನಿಸಿದಾಗ, ಕಿಶೋರ್ ತನ್ನ ಬಳಿಯಿದ್ದ ಚಾಕುವಿನಿಂದ ಪೊಲೀಸ್ ಸಿಬ್ಬಂದಿ ಗಣೇಶ್ ಅವರ ಮೇಲೆ ದಿಢೀರ್ ಹಲ್ಲೆ ನಡೆಸಿದ್ದಾನೆ.

ಈ ವೇಳೆ ಆತ್ಮರಕ್ಷಣೆಗಾಗಿ ಇನ್ಸ್‌ಪೆಕ್ಟರ್ ಅವರು ಆರೋಪಿ ಕಿಶೋರ್ ಕಾಲಿಗೆ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಗಾಯಗೊಂಡ ಪೊಲೀಸ್ ಸಿಬ್ಬಂದಿ ಗಣೇಶ್ ಹಾಗೂ ಆರೋಪಿ ಕಿಶೋರನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ನಿಖಿಲ್ ಬಿ. ಅವರು ಆಸ್ಪತ್ರೆಗೆ ಭೇಟಿ ನೀಡಿ ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ದಾರೆ.

- Advertisement -

Latest News

error: Content is protected !!