Sunday, May 5, 2024
Homeಕರಾವಳಿಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಚರಣೆ: 132 ಕೆಜಿ ಗಾಂಜಾ ವಶ, ಆರೋಪಿಗಳು ಅಂದರ್

ಮಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಚರಣೆ: 132 ಕೆಜಿ ಗಾಂಜಾ ವಶ, ಆರೋಪಿಗಳು ಅಂದರ್

spot_img
- Advertisement -
- Advertisement -

ಮಂಗಳೂರು: ಬೃಹತ್ ಪ್ರಮಾಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಅರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಸುಮಾರು 132 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ರಮೀಝ್ ರಾಝ್,ಮತ್ತು ಅಬ್ದುಲ್ ಖಾದರ್ ಹ್ಯಾರಿಸ್ ಬಂಧಿತ ಅರೋಪಿಗಳು, ಅಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ಸೇರಿದಂತೆ ಬೆಂಗಳೂರು ಹಾಗೂ ಕೇರಳ ರಾಜ್ಯಕ್ಕೆ ಬೃಹತ್‌ ಪ್ರಮಾಣದಲ್ಲಿ ಮಹೇಂದ್ರ XUV 500 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದರು.ಸಿಸಿಬಿ ಪೊಲೀಸರ ಕಾರ್ಯಚರಣೆ ವೇಳೆ 132 ಕೆಜಿ ಗಾಂಜಾ, 2 ಮೊಬೈಲ್ ಫೋನ್ 3 ತಲವಾರು,ನಗದು ಹಾಗೂ ಮಹೇಂದ್ರ XUV 500 ಕಾರು ಸೇರಿದಂತೆ 39,15,000/- ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಆರೋಪಿಗಳ ಪೈಕಿ ರಮೀಝ್ ರಾಝ್ ಎಂಬಾತನ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸೇವನೆಗೆ ಸಂಬಂಧಪಟ್ಟ ಒಂದು ಪ್ರಕರಣ, ಗಾಂಜಾ ಮಾರಾಟ ಮಾಡಿದ ಪ್ರಕರಣ, ಹತ್ತಿ ಪ್ರಕರಣ, ಹೀಗೆ ಒಟ್ಟು 3 ಪ್ರಕರಣ ದಾಖಲಾಗಿರುತ್ತದೆ, ಅಲ್ಲದೇ, ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಂದು ಪ್ರಕರಣ ಹಾಗೂ ಕೊಲೆ ಯತ್ನ ಪ್ರಕರಣ ಮತ್ತು ಮಂಗಳೂರು ಉತ್ತರ ಪೊಲೀಸ್‌ ಠಾಣೆಯಲ್ಲಿ ಗಾಂಜಾ ಮಾರಾಟದ ಒಂದು ಪ್ರಕರಣ ಹೀಗೆ ಒಟ್ಟು 6 ಪ್ರಕರಣಗಳು ದಾಖಲಾಗಿದೆ.ಇನ್ನೋರ್ವ ಆರೋಪಿ ಅಬ್ದುಲ್ ಖಾದರ್ ಹ್ಯಾರಿಸ್ ಎಂಬಾತನ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ ಹಾಗೂ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 12 ಹಲ್ಲೆ ಪ್ರಕರಣಗಳು ದಾಖಲಾಗಿದೆ.

- Advertisement -
spot_img

Latest News

error: Content is protected !!