Sunday, May 5, 2024
Homeಕರಾವಳಿಮಂಗಳೂರು; ಕೃತಕ ನೆರೆಯ ನಡುವೆಯೂ ಜೀವದ ಹಂಗು ತೊರೆದು 40 ಮನೆಗಳಿಗೆ ವಿದ್ಯುತ್ ಪೂರೈಸಿದ ಮೆಸ್ಕಾಂ...

ಮಂಗಳೂರು; ಕೃತಕ ನೆರೆಯ ನಡುವೆಯೂ ಜೀವದ ಹಂಗು ತೊರೆದು 40 ಮನೆಗಳಿಗೆ ವಿದ್ಯುತ್ ಪೂರೈಸಿದ ಮೆಸ್ಕಾಂ ಸಿಬ್ಬಂದಿ; ಸ್ಥಳೀಯರಿಂದ ವ್ಯಾಪಕ ಪ್ರಶಂಸೆ

spot_img
- Advertisement -
- Advertisement -

ಮಂಗಳೂರು; ಕೃತಕ ನೆರೆಯ ನಡುವೆಯೂ ಜೀವದ ಹಂಗು ತೊರೆದು ಮೆಸ್ಕಾಂ ಸಿಬ್ಬಂದಿ 40 ಮನೆಗಳಿಗೆ ವಿದ್ಯುತ್ ಪೂರೈಸಿದ ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರರಾದ ಘಟನೆ ಬೆಳ್ಮ ಗ್ರಾಮದ ಬೆರಿಕೆ ಎಂಬಲ್ಲಿ ನಡೆದಿದೆ.

ಬೆಳ್ಮ ಗ್ರಾಮದ ಬೆರಿಕೆ ಎಂಬಲ್ಲಿ ಬಿರುಗಾಳಿ, ಮಳೆಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ, 40 ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಈ ಬಗ್ಗೆ ಸ್ಥಳೀಯರು ಮೆಸ್ಕಾಂಗೆ ದೂರು ನೀಡಿದ್ದರು.ಸ್ಥಳಕ್ಕೆ ಮೆಸ್ಕಾಂನ ಪವರ್ ಮೆನ್ ವಸಂತ್ ಹಾಗೂ ಸುರೇಶ್ ಭೇಟಿ ನೀಡಿದ್ದಾರೆ. ಆದರೆ ಟ್ರಿಪ್ ಆಗಿದ್ದ ವಿದ್ಯುತ್ ಕಂಬವು ನೆರೆ ನೀರಿನಿಂದ ಆವೃತಗೊಂಡಿತ್ತು. ಗದ್ದೆಯಲ್ಲಿರುವ ನೆರೆ ನೀರನ್ನು ಲೆಕ್ಕಿಸದ ಸಿಬ್ಬಂದಿ ಸ್ಥಳೀಯರೊಬ್ಬರ ಮಾರ್ಗದರ್ಶನದಿಂದ ನೀರಿಗೆ ಇಳಿದು ಕಂಬವನ್ನೇರಿ ತುರ್ತು ದುರಸ್ತಿ ಕಾರ್ಯ ನಡೆಸಿ ಸ್ಥಳೀಯರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆಗಳ ಅತಿ ಹೆಚ್ಚು, ಆದರೆ ಇಲ್ಲಿ ಒಬ್ಬ ಮೆಸ್ಕಾಂ ಸಿಬ್ಬಂದಿ ಕೃತಕ ನೆರೆಯ ನಡುವೆಯೂ ತಮ್ಮ ಜೀವದ ಹಂಗು ತೊರೆದು 40 ಮನೆಗಳಿಗೆ ವಿದ್ಯುತ್ ಪೂರೈಸಿದ್ದಾರೆ. ಈ ಕುರಿತ ವಿಡಿಯೊವನ್ನು ಮೆಸ್ಕಾಂ ಜೆ.ಇ. ನಿತೇಶ್ ಹೊಸಗದ್ದೆ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ತಮ್ಮ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

- Advertisement -
spot_img

Latest News

error: Content is protected !!