- Advertisement -
- Advertisement -
ಉಪ್ಪಿನಂಗಡಿ: ಪೆರ್ನೆ ಬಳಿ ಹೆದ್ದಾರಿ ಆಕ್ಟಿವಾಗೆ ಟಿಪ್ಪರ್ ಢಿಕ್ಕಿಯಾಗಿ ಚಿಂತಾಜನರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನೆರವಾಗಿ ಮಾನವೀಯತೆ ಮೆರೆದಿದ್ದಾರೆ.
ಅಪಘಾತವಾಗುತ್ತಿದ್ದಂತೆ ಟಿಪ್ಪರ್ ಚಾಲಕ ಸ್ಥಳದಲ್ಲಿ ಗಾಡಿ ಬಿಟ್ಟು ಪರಾರಿಯಾಗಿದ್ದ. ಬಳಿಕ ಸ್ಥಳದಲ್ಲಿ ಪರಿಸ್ಥಿತಿ ಬಿಗಡಾಯಿಸಿತ್ತು, ಈ ವೇಳೆ ಸ್ಥಳಕ್ಕೆ ಆಲಂಕಾರು ಕಡೆಗೆ ಗ್ರಾಮ ವಾಸ್ತವ್ಯಕ್ಕೆ ತೆರಳುತ್ತಿದ್ದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆಗಮಿಸಿದ್ದಾರೆ. ವಾಹನದಿಂದ ಇಳಿದು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.
ಅಪಘಾತದಲ್ಲಿ ಮಹಿಳೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
- Advertisement -