Thursday, June 4, 2026
Homeತಾಜಾ ಸುದ್ದಿಇಂದು ಮದುವೆಯಾಗಬೇಕಾಗಿದ್ದ ಮದುಮಗ ಕೊರೊನಾಗೆ ಬಲಿ

ಇಂದು ಮದುವೆಯಾಗಬೇಕಾಗಿದ್ದ ಮದುಮಗ ಕೊರೊನಾಗೆ ಬಲಿ

- Advertisement -
- Advertisement -

ಚಿಕ್ಕಮಗಳೂರು : ಇಂದು ಹಸೆಮಣೆ ಏರಬೇಕಾಗಿದ್ದ ಯುವಕನೋರ್ವ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದೇವರಕೊಡಿಗೆಯಲ್ಲಿ ಇಂದು ಮದುವೆಯಾಗಬೇಕಿದ್ದ 32 ವರ್ಷದ ಪೃಥ್ವಿರಾಜ್ ಎಂಬ ಯುವಕ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.

10 ದಿನಗಳ ಹಿಂದೆ ಬೆಂಗಳೂರಿನಿಂದ ಮನೆಗೆ ಬಂದಿದ್ದ ಪೃಥ್ವಿರಾಜ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಕೂಡಲೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮದುವೆ ಕಾರ್ಯಕ್ರಮದ ನಿಮಿತ್ತ ಸಂಭ್ರಮ ನೆಲಸಬೇಕಿದ್ದ ಮನೆಯಲ್ಲಿ ಸೂತಕ ಆವರಿಸಿದ್ದು, ಯುವಕನ ಸಾವಿಗೆ ಗ್ರಾಮಸ್ಥರು, ಸಂಬಂಧಿಕರು ಕಣ್ಣೀರಿಡುತ್ತಿದ್ದಾರೆ.

- Advertisement -

Latest News

error: Content is protected !!