Monday, August 31, 2026
Homeಕರಾವಳಿಮಂಗಳೂರಿನಲ್ಲಿ ಸಮರವೀರ ಕೆದಂಬಾಡಿ ರಾಮಯ್ಯ ಗೌಡ ಕಂಚಿನ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ

ಮಂಗಳೂರಿನಲ್ಲಿ ಸಮರವೀರ ಕೆದಂಬಾಡಿ ರಾಮಯ್ಯ ಗೌಡ ಕಂಚಿನ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ

- Advertisement -
- Advertisement -

ಮಂಗಳೂರು: ಅಮರ ಸುಳ್ಯ ಸಮರ ಸ್ವಾತಂತ್ರ್ಯ ಹೋರಾಟದ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ ಕಂಚಿನ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ ಇಂದು ನಡೆಯಿತು. ಮಂಗಳೂರಿನ‌ ಬಾವುಟಗುಡ್ಡೆಯಲ್ಲಿ ನಡೆದ ಸಮಾರಂಭದಲ್ಲಿ ಭೂಮಿ ಪೂಜೆ ನೆರವೇರಿಸಲಾಯಿತು. ‌

ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಮತ್ತು ಸಚಿವ ಎಸ್. ಅಂಗಾರ ಭೂಮಿ ಪೂಜೆ ‌ನೆರವೇರಿಸಿದರು. ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರಾದ ಸಂಜೀವ ಮಠಂದೂರು, ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಮತ್ತು ಮಹಾನಗರ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 10 ಲಕ್ಷ‌ ರೂಪಾಯಿ ಅನುದಾನ ಮತ್ತು ಮಂಗಳೂರು ಮಹಾನಗರ ಪಾಲಿಕೆಯ 30 ಲಕ್ಷ ರೂಪಾಯಿ ಅನುದಾನದಲ್ಲಿ ಕಂಚಿನ ಪ್ರತಿಮೆ ನಿರ್ಮಾಣವಾಗಲಿದೆ. ಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕ ಉಸ್ತುವಾರಿ ಸಮಿತಿ ಪ್ರತಿಮೆ ಸ್ಥಾಪನೆಯ ನೇತೃತ್ವ ವಹಿಸಿದೆ

- Advertisement -

Latest News

error: Content is protected !!