Tuesday, April 30, 2024
Homeಕರಾವಳಿಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ

ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ

spot_img
- Advertisement -
- Advertisement -

ಮಂಗಳೂರು: ಮಂಗಳೂರು ನಗರದ ವಿವಿಧ ಭಾಗಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಹಾಗೂ ಖಾಸಗಿ ಪ್ರಾಯೋಜಕತ್ವದಲ್ಲಿ ನಡೆಯುವ ವಿವಿಧ ಕಾಮಗಾರಿಗಳಿಗೆ ಇಂದು ಭೂಮಿ ಪೂಜೆ ನಡೆಯಿತು.

ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆಯಲ್ಲಿ ಪಾಲ್ಗೊಂಡಿದ್ದರು.

40 ಲಕ್ಷ ರೂಪಾಯಿ ವೆಚ್ಚದಲ್ಲಿ ಪಂಪ್ ವೆಲ್ ಮಹಾವೀರ ವೃತ್ತ, 40 ಲಕ್ಷ ರೂಪಾಯಿ ವೆಚ್ಚದಲ್ಲಿ ಎ.ಬಿ. ಶೆಟ್ಟಿ ಸರ್ಕಲ್ ಅಭಿವೃದ್ಧಿ , 2 ಕೋಟಿ ರೂಪಾಯಿ ವೆಚ್ಚದಲ್ಲಿ ಪಾಂಡೇಶ್ವರ ಶಿವನಗರದಲ್ಲಿ ಕಲ್ವರ್ಟ್ ನಿರ್ಮಾಣ, 4.25 ಕೋಟಿ ರೂಪಾಯಿ ವೆಚ್ಚದಲ್ಲಿ ಪಾಂಡೇಶ್ವರ ಮುಖ್ಯ ರಸ್ತೆಯಿಂದ ಬೋಳಾರ ಲೀವೆಲ್ ಜಂಕ್ಷನ್ ವರೆಗೆ ರಸ್ತೆ, ಪಾದಾಚಾರಿ ಮಾರ್ಗ ಹಾಗೂ ಇಕ್ಕೆಲಗಳಲ್ಲಿ ಚರಂಡಿ ನಿರ್ಮಾಣ ಕಾಮಗಾರಿ, 2.25 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಜೇಶ್ವರ ಗೋವಿಂದ ಪೈ ಸರ್ಕಲ್ ನಿಂದ ಮಹಮ್ಮಾಯಿ ದೇವಸ್ಥಾನ ವರೆಗಿನ ರಸ್ತೆಯಲ್ಲಿ ಭೂಗತ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಲಾಯಿತು.

- Advertisement -
spot_img

Latest News

error: Content is protected !!