- Advertisement -
![]()
- Advertisement -
ಮಂಗಳೂರು: ಕೇಂದ್ರ ಸರ್ಕಾರ ಭೂತಾನ್‌ನಿಂದ ಪ್ರತಿವರ್ಷ ಕನಿಷ್ಠ ಆಮದು ಬೆಲೆ (ಎಂಐಪಿ)ಯ ಷರತ್ತು ಇಲ್ಲದೆಯೇ 17,000 ಟನ್ ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದು ಎಂದು ಬುಧವಾರ ಅನುಮತಿ ನೀಡಿದೆ. ಆದ್ರೆ ಬೆಳೆಗಾರರು ಆತಂಕ ಪಡಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಭೂತಾನ್‌ನಿಂದ ಅಡಿಕೆ ಆಮದಿನಿಂದ ನಮ್ಮಲ್ಲಿನ ಅಡಿಕೆ ದರದ ಸ್ಥಿರತೆ ಮೇಲೆ ಯಾವ ಪರಿಣಾಮವೂ ಬೀರಲ್ಲ. ದೇಶೀಯ ಗುಣಮಟ್ಟದ ಚಾಲಿಗೆ ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ. ಅಲ್ಲದೇ ಕೇಂದ್ರದ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ಕಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್‌ಗೆ ಕ್ಯಾಂಪ್ಕೋ ಪತ್ರ ಬರೆದಿದೆ ಎಂದೂ ತಿಳಿಸಿದ್ದಾರೆ.
- Advertisement -


