Tuesday, June 9, 2026
Homeತಾಜಾ ಸುದ್ದಿಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಹೇಳಿಕೆ

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಹೇಳಿಕೆ

- Advertisement -
- Advertisement -

ಬೆಳಗಾವಿ : ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಲಾಗಿದ್ದು, ಶೀಘ್ರವೇ ಗೃಹಲಕ್ಷ್ಮೀ ಯೊಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಲಾಗುತ್ತದೆ. ಸಾಫ್ಟ್ ವೇರ್, ಆಯಪ್ ರೆಡಿ ಮಾಡಲಾಗುತ್ತಿದೆ. ಹೀಗಾಗಿ ಯೋಜನೆ ಅನುಷ್ಠಾನ ವಿಳಂಬವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಇಂದು ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಗೃಹ ಬಳಕೆಯ ಗ್ರಾಹಕರಿಗೆ ಮಾಸಿಕ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವಂತ ಯೋಜನೆಗೆ ಅರ್ಜಿ ಸಲ್ಲಿಸಲು ಶುರುವಾಗಿದೆ. ಆದರೆ ಕೆಲವಡೆ ಸರ್ವರ್ ಡೌನ್ ಆದ ಪರಿಣಾಮ ಅರ್ಜಿ ಸಲ್ಲಿಸಲು ಪರದಾಡುವಂತಾಗಿದೆ. ಬೆಳಗ್ಗೆಯಿಂದ ಗೃಹಶಕ್ತಿ ಯೋಜನೆಗೆ ಅರ್ಜಿ ಸಲ್ಲಿಸುವ ವೆಬ್ ಸೈಟ್ ಸರಿಯಾಗಿತ್ತು. ಆದರೆ 10 ಗಂಟೆಯ ನಂತರ ಓಪನ್ ಆಗುತ್ತಿಲ್ಲ. ಅರ್ಜಿ ಸಲ್ಲಿಸಲು ಹೋದ ಜನರು ಪರದಾಡುವಂತಾಗಿದೆ.

- Advertisement -

Latest News

error: Content is protected !!