Thursday, June 4, 2026
Homeಕರಾವಳಿದ.ಕ. ಜಿಲ್ಲಾಡಳಿತದಿಂದ ಮಂಗಳೂರಿನಲ್ಲಿ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ

ದ.ಕ. ಜಿಲ್ಲಾಡಳಿತದಿಂದ ಮಂಗಳೂರಿನಲ್ಲಿ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ

- Advertisement -
- Advertisement -

ಮಂಗಳೂರು: ರಾಜ್ಯ ಸರ್ಕಾರದಿಂದ ಇಂದು ಗ್ಯಾರಂಟಿ ಘೋಷಣೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲ್ಪಡುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದಲೂ ಯೋಜನೆಗೆ ಚಾಲನೆ ನೀಡಲಾಯಿತು.

ಮಂಗಳೂರಿನ ಪುರಭವನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಂಗಳೂರು ನಗರದ ಯೋಜನೆಯ ಹಲವು ಫಲಾನುಭವಿ ಮಹಿಳೆಯರು ಭಾಗಿಯಾಗಿದ್ದರು.ಫಲಾನುಭವಿಗಳಿಂದಲೇ ಜ್ಯೋತಿ ಬೆಳಗಿಸುವ ಮೂಲಕ ಗೃಹಲಕ್ಷ್ಮೀ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

ಇದೇ ವೇಳೆ ಪುರಭವನದಲ್ಲಿ ಎಲ್ ಇಡಿ ಪರದೆಯ ಮೂಲಕ ಮೈಸೂರಿನಲ್ಲಿ ನಡೆಯುತ್ತಿದ್ದ ರಾಜ್ಯಮಟ್ಟದ ಉದ್ಘಾಟನಾ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.

- Advertisement -

Latest News

error: Content is protected !!