- Advertisement -
- Advertisement -
ಬೆಂಗಳೂರು: ರಾಜ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶೀಘ್ರವೇ ನೋಂದಣಿ ಪುನರಾರಂಭಗೊಳ್ಳಲಿದೆ.ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಟ್ವೀಟ್ ಮೂಲಕ ಮಾಹಿತಿ ನೀಡಿದೆ.
ಈಗಾಗಲೇ ನೋಂದಾಯಿತ ಫಲಾನುಭವಿಗಳ ಖಾತೆಗೆ 2000 ರೂಪಾಯಿ ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದಿರಲೆಂದು ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ನೋಂದಣಿಯಾದ ಎಲ್ಲಾ ಫಲಾನುಭವಿಗಳ ಖಾತೆಗೆ ಮೊದಲ ಕಂತಿನ ಹಣ ಜಮಾವಣೆಯಾದ ಬಳಿಕ ಮತ್ತೆ ನೋಂದಣಿ ಪ್ರಕ್ರಿಯೆ ಪುನರಾರಂಭಗೊಳ್ಳಲಿದೆ.
ಹೆಚ್ಚಿನ ಮಾಹಿತಿಗಾಗಿ ಫಲಾನುಭವಿಗಳು ಸಹಾಯವಾಣಿ 1902 ಸಂಖ್ಯೆಗೆ ಕರೆ ಮಾಡಿ ಪಡೆಯಬಹುದಾಗಿದೆ.
- Advertisement -