Monday, May 6, 2024
Homeತಾಜಾ ಸುದ್ದಿಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟನೆ:ನೋಂದಣಿ ಸ್ಥಗಿತ ಕುರಿತ ಮಹಿಳಾ...

ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟನೆ:ನೋಂದಣಿ ಸ್ಥಗಿತ ಕುರಿತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಟ್ವೀಟ್ ಡಿಲೀಟ್

spot_img
- Advertisement -
- Advertisement -

ಬೆಂಗಳೂರು: ‌ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ ಮತ್ತು ನೋಂದಣಿ ಪ್ರಕ್ರಿಯೆ ನಿರಂತರವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಗೃಹಲಕ್ಷ್ಮಿ ಯೋಜನೆ ಸ್ಥಗಿತ ಎಂಬ ಮಾಹಿತಿ ಪ್ರಕಟವಾದ ಕುರಿತಂತೆ ಪ್ರತಿಕ್ರಿಯಿಸಿದ ಸಚಿವರು, ಕೆಲವರ ಅಚಾತುರ್ಯದಿಂದ ಈ ರೀತಿ ಆಗಿದ್ದು, ಇದು ನಿರಂತರವಾಗಿ ನಡೆಯುವ ಯೋಜನೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಡಿದವರಿಗೆ ನೋಟೀಸ್ ಜಾರಿ ಮಾಡುತ್ತೇವೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಈ ಕುರಿತು ಇಲಾಖೆಯ ಕಾರ್ಯದರ್ಶಿ ಮತ್ತು ನಿರ್ದೇಶಕರೊಂದಿಗೆ ಸಭೆ ನಡೆಸಿದ್ದು, ಸಂಬಂಧಿಸಿದವರ ಮೇಲೆ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಸಚಿವೆ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿ ಮಾಹಿತಿ ನೀಡಲಾಗಿತ್ತು. ಬಳಿಕ ಸಚಿವರ ಸೂಚನೆ ಮೇರೆಗೆ ಟ್ವೀಟ್ ಅನ್ನು ಡಿಲೀಟ್ ಮಾಡಲಾಗಿತ್ತು.

ಇದುವರೆಗೂ ಸುಮಾರು 63 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗೆ ಹಣ ಜಮಾ ಆಗಿದ್ದು, ಗೃಹಲಕ್ಷ್ಮಿ ಯೋಜನೆಯ ಒಟ್ಟು 1.28 ಕೋಟಿ ಫಲಾನುಭವಿಗಳ ಪೈಕಿ 1.12 ಕೋಟಿ ಫಲಾನುಭವಿಗಳು ಇದುವರೆಗೂ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!