Friday, May 17, 2024
Homeತಾಜಾ ಸುದ್ದಿಗೃಹ ಲಕ್ಷ್ಮೀ ಯೋಜನೆಯ ನೋಂದಣಿಗೆ ಇಂದು ಚಾಲನೆ

ಗೃಹ ಲಕ್ಷ್ಮೀ ಯೋಜನೆಯ ನೋಂದಣಿಗೆ ಇಂದು ಚಾಲನೆ

spot_img
- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಘೋಷಣೆಗಳಲ್ಲೊಂದಾಗಿರುವ ಗೃಹ ಲಕ್ಷ್ಮೀ ಯೋಜನೆಗೆ ಇಂದು ಚಾಲನೆ ದೊರೆಯಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಇಂದು ಚಾಲನೆ ನೀಡಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಜೆ 5 ಗಂಟೆಗೆ ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ನೋಂದಣಿ ಪ್ರಕ್ರಿಯೆಗೆ ಚಾಲನೆ‌ ನೀಡಲಿದ್ದಾರೆ.

ಕೇಂದ್ರ ಸಚಿವರಾದ
ಶ್ರೀಮತಿ ನಿರ್ಮಲಾ ಸೀತಾರಾಮನ್ ಮತ್ತು ರಾಜೀವ್ ಚಂದ್ರಶೇಖರ್ ‌ಸಮಾರಂಭಕ್ಕೆ ವಿಶೇಷ ‌ಆಹ್ವಾನಿತರಾಗಿದ್ದು, ವಿಧಾನ ಪರಿಷತ್ ಸಭಾಪತಿ ‌
ಬಸವರಾಜ ಹೊರಟ್ಟಿ ಮತ್ತು ವಿಧಾನಸಭೆ ‌ಸ್ಪೀಕರ್‌ ಯು.ಟಿ. ಖಾದರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಂಜೂರಾತಿ ಆದೇಶ ಹಂಚಿಕೆ ಮಾಡಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಯೋಜನೆಯ ಲಾಂಛನ ಮತ್ತು ಪೋಸ್ಟರ್ ಅನಾವರಣಗೊಳಿಸಲಿದ್ದಾರೆ.

ಇಂದಿನಿಂದ ಯೋಜನೆಯ‌ ನೋಂದಣಿ ಪ್ರಕ್ರಿಯೆ‌ ಆರಂಭವಾಗಲಿದ್ದು ಸಂಪೂರ್ಣ ‌ಉಚಿತವಾಗಿರಲಿದೆ.

- Advertisement -
spot_img

Latest News

error: Content is protected !!