Monday, June 8, 2026
Homeತಾಜಾ ಸುದ್ದಿಸರ್ಕಾರಿ ಪ್ರಾಥಮಿಕ ಮತ್ತು ಪ್ರೌಡಶಾಲಾ ಅತಿಥಿ ಶಿಕ್ಷಕರ ಗೌರವ ವೇತನ ಹೆಚ್ಚಳ

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಡಶಾಲಾ ಅತಿಥಿ ಶಿಕ್ಷಕರ ಗೌರವ ವೇತನ ಹೆಚ್ಚಳ

- Advertisement -
- Advertisement -

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ನೇಮಕಾತಿ ಮಾಡಿಕೊಳ್ಳುವ ಅತಿಥಿ ಶಿಕ್ಷಕರ ಗೌರವ ವೇತನ ಪರಿಷ್ಕರಣೆ ಮಾಡಲಾಗಿದೆ.ಸಂಭಾವನೆ ಪರಿಷ್ಕರಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಅತಿಥಿ ಶಿಕ್ಷಕರಿಗೆ ಪ್ರಸ್ತುತ 7.500 ರೂಪಾಯಿ ಇದ್ದ ಗೌರವ ಧನವನ್ನು 10 ಸಾವಿರ ರೂಪಾಯಿಗಳಿಗೆ ಮತ್ತು ಪ್ರೌಢ ಶಾಲೆಗಳಲ್ಲಿನ ಅತಿಥಿ ಶಿಕ್ಷಕರಿಗೆ 8000 ರೂಪಾಯಿ ಇದ್ದ ಗೌರವ ಧನವನ್ನು 10.500 ರೂಪಾಯಿಗಳಿಗೆ ಹೆಚ್ಚಳ ಮಾಡಲಾಗಿದೆ.

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ನೇಮಕಾತಿಯಾಗುವ ಅತಿಥಿ ಶಿಕ್ಷಕರ ಗೌರವ ವೇತನವನ್ನು ಕಳೆದ ಆರು ವರ್ಷಗಳಿಂದ ರಾಜ್ಯ ಸರ್ಕಾರ ಏರಿಕೆ ಮಾಡಿರಲಿಲ್ಲ.

ಇದೀಗ ಶಾಲೆಗಳಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಭರ್ತಿ ಮಾಡಿಕೊಳ್ಳಲು ಗೌರವ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಮುಂದಾಗಿದೆ.

- Advertisement -

Latest News

error: Content is protected !!