Tuesday, May 14, 2024
Homeಕರಾವಳಿಮಂಗಳೂರು: ಜಿಲ್ಲೆಯಲ್ಲಿ ಈದ್‌ ಮಿಲಾದ್‌ ಸರಳ ಆಚರಣೆ; ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಜಿಲ್ಲೆಯಲ್ಲಿ ಈದ್‌ ಮಿಲಾದ್‌ ಸರಳ ಆಚರಣೆ; ಜಿಲ್ಲಾಧಿಕಾರಿ ಆದೇಶ

spot_img
- Advertisement -
- Advertisement -

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್‌ ನಿಯಮ ಪಾಲಿಸಿಕೊಂಡು ಈದ್‌ ಮಿಲಾದ್‌ ಅನ್ನು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಸರಳವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.

ಮಸೀದಿ ಹಾಗೂ ದರ್ಗಾಗಳಲ್ಲಿ ಸುರಕ್ಷಿತ ಅಂತರ ಹಾಗೂ ಕೋವಿಡ್‌ ಶಿಷ್ಟಾಚಾರದೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಜತೆಗೆ ದೈಹಿಕ ಅಂತರ ಕಾಪಾಡಬೇಕು. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಪ್ರವಚನ ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ/ಸಾಂಸ್ಕೃತಿಕ ಕಾರ್ಯಕ್ರಮ/ಸಭೆ/ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ.ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಮಸೀದಿಗಳಲ್ಲಿ ನಮಾಜ್‌ ನಿರ್ವಹಿಸುವವರ ಮಧ್ಯೆ ಕನಿಷ್ಠ ಆರು ಅಡಿ ಅಂತರ ಇರಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ/ಡಿಜಿಟಲ್‌ ಸೌಂಡ್‌ ಸಿಸ್ಟಮ್‌ ಬಳಕೆ ಮಾಡಬಾರದು.

ಮಸೀದಿಗಳನ್ನು ಹೊರತುಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ (ಸಭಾಂಗಣ, ಸಮುದಾಯ ಭವನ, ಶಾದಿಮಹಲ್‌, ಇತರ ತೆರೆದ ಜಾಗ) ಸಾಮೂಹಿಕ ಪ್ರಾರ್ಥನೆ ಆಯೋಜಿಸುವಂತಿಲ್ಲ ಹಾಗೂ ಈದ್‌ ಮಿಲಾದ್‌ ಆಚರಣೆಯಲ್ಲಿ ಸಾಮೂಹಿಕ ಮೆರವಣಿಗೆ ನಿಷೇಧಿಸಲಾಗಿದೆ.

- Advertisement -
spot_img

Latest News

error: Content is protected !!