Wednesday, June 24, 2026
Homeತಾಜಾ ಸುದ್ದಿಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ

ಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ

- Advertisement -
- Advertisement -

ಹಮದಾಬಾದ್: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಗುಜರಾತ್ ಸಿಎಂ ವಿಜಯ್ ರೂಪಾನಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ರಾಜ್ಯಪಾಲ ಆಚಾರ್ಯ ದೇವವ್ರತ್ ಅವರನ್ನು ಭೇಟಿ ಮಾಡಿದ ವಿಜಯ್ ರೂಪಾನಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸಲಹೆ ಮೇರೆಗೆ ಗುಜರಾತ್ ಅಭಿವೃದ್ಧಿ ದೃಷ್ಟಿಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದರು.

ಗುಜರಾತ್ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿಯಿರುವಾಗಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.‌ ಮುಂದಿನ ವರ್ಷ ಪಂಚ ರಾಜ್ಯಗಳ ಚುನಾವಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಗೆಲವು ಸಾಧಿಸುವ ನಿಟ್ಟಿನಲ್ಲಿ ಸಿಎಂ ಬದಲಾವಣೆಗೆ ಬಿಜೆಪಿ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಅಂದಹಾಗೆ ಬಿಜೆಪಿ ಆಡಳಿತದ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುತ್ತಿರುವ ಮೂರನೇ ರಾಜ್ಯ ಗುಜರಾತ್ ಆಗಿದೆ. ಬಹುಮತ ಹೊಂದಿದ್ದರು ಉತ್ತರಾಖಂಡದಲ್ಲಿ ತಿರಾಂತ್ ಸಿಂಗ್ ರಾವತ್ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲಾಯಿತು. ನಂತರದಲ್ಲಿ ಕರ್ನಾಟಕದಲ್ಲಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಮಾಡಲಾಯಿತು. ಇದೀಗ ಗುಜರಾತ್ ನಲ್ಲೂ ಸಿಎಂ ಬದಲಾವಣೆಯಾಗಲಿದೆ.

- Advertisement -

Latest News

error: Content is protected !!