Thursday, June 4, 2026
Homeತಾಜಾ ಸುದ್ದಿಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ 6 ತಿಂಗಳು ಜೈಲು

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ 6 ತಿಂಗಳು ಜೈಲು

- Advertisement -
- Advertisement -

ಗುಜರಾತ್:‌ ದಲಿತ ನಾಯಕ ಜಿಗ್ನೇಶ್ ಮೇವಾನಿ ಮತ್ತು ಇತರೆ 18 ಮಂದಿಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿನ ಸ್ಥಳೀಯ ನ್ಯಾಯಾಲಯವೊಂದು ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಗುಜರಾತ್ ವಿಶ್ವವಿದ್ಯಾನಿಲಯದ ಕಾನೂನು ಭವನ ಕಟ್ಟಡಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನು ಮರುನಾಮಕರಣ ಮಾಡುವಂತೆ 2016ರಲ್ಲಿ ಪ್ರತಿಭಟನೆ ನಡೆಸಿದ್ದಕ್ಕಾಗಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 20 ಮಂದಿಯನ್ನು ಬಂಧಿಸಲಾಗಿತ್ತು. ಈ ಪೈಕಿ ಓರ್ವ ಮೃತಪಟ್ಟ ಹಿನ್ನೆಲೆಯಲ್ಲಿ ಉಳಿದ 19 ಮಂದಿಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

- Advertisement -

Latest News

error: Content is protected !!