Sunday, July 20, 2025
Homeತಾಜಾ ಸುದ್ದಿಅಹಮಬಾದ್ ನಲ್ಲಿ ಭೀಕರ ವಿಮಾನ ದುರಂತ ಪ್ರಕರಣ; ಗುಜರಾತ್‌ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ಸಾವು

ಅಹಮಬಾದ್ ನಲ್ಲಿ ಭೀಕರ ವಿಮಾನ ದುರಂತ ಪ್ರಕರಣ; ಗುಜರಾತ್‌ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ಸಾವು

spot_img
- Advertisement -
- Advertisement -

ಅಹಮಬಾದ್ ನಲ್ಲಿ ನಡೆದ ಭೀಕರ ವಿಮಾನ ದುರಂತದಲ್ಲಿ ಗುಜರಾತ್‌ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ಸಾವನ್ನಪ್ಪಿದ್ದಾರೆ.ಲಂಡನ್‌ಗೆ ಪ್ರಯಾಣಿಸುತ್ತಿದ್ದ ವಿಜಯ್‌ ರೂಪಾನಿ 12ನೇ ಸೀಟಿನಲ್ಲಿ ಕುಳಿತುಕೊಂಡಿದ್ದರು. ಲಂಡನ್‌ನಲ್ಲಿರುವ ಮಗಳ ಮನೆಗೆ ತೆರಳಲು ರೂಪಾನಿ ವಿಮಾನ ಹತ್ತಿದ್ದರು. 

ಇಬ್ಬರು ಪೈಲಟ್‌, 10 ಸಿಬ್ಬಂದಿ ಸೇರಿ ಒಟ್ಟು 242 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈಗಾಗಲೇ 130ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ.ಇನ್ನು ವಿಜಯ್ ರೂಪಾನಿ ವಿಮಾನದಲ್ಲಿ ಕುಳಿತಿರುವ ಫೋಟೋ ವೈರಲ್ ಆಗಿದೆ.

ಅಪಘಾತಕ್ಕೆ ಕೆಲವೇ ಕ್ಷಣಗಳ ಮೊದಲು ವಿಮಾನದಲ್ಲಿ ಕೂತಿರುವ ವಿಜಯ್ ರೂಪಾನಿ

ಆಸ್ಪತ್ರೆಗೆ ಸೇರಿದ ಹಲವು ಮಂದಿಯ ಸ್ಥಿತಿ ಗಂಭೀರವಾಗಿದೆ. ವಿಮಾನ ಮೆಡಿಕಲ್‌ ಕಾಲೇಜಿನ ಹಾಸ್ಟೆಲಿನ ಅಡುಗೆ ಮನೆ ಮೇಲೆ ಬಿದ್ದಿದೆ. ಮಧ್ಯಾಹ್ನ ವಿದ್ಯಾರ್ಥಿಗಳು ಊಟ ಮಾಡುವ ಸಮಯದಲ್ಲೇ ಪತನ ಗೊಂಡಿರುವ ಕಾರಣ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. 

- Advertisement -
spot_img

Latest News

error: Content is protected !!