Sunday, June 28, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ವಶಪಡಿಸಿಕೊಂಡಿದ್ದ ಬಂದೂಕು ಪ್ರಯೋಗಾಲಯಕ್ಕೆ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ವಶಪಡಿಸಿಕೊಂಡಿದ್ದ ಬಂದೂಕು ಪ್ರಯೋಗಾಲಯಕ್ಕೆ

- Advertisement -
- Advertisement -

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ ಅಕ್ರಮ ಬಂದೂಕು ಎಫ್.ಎಸ್.ಎಲ್ ಗೆ ಬೆಳ್ತಂಗಡಿ ಪೊಲೀಸರು ಕಳುಹಿಸಿದ್ದಾರೆ.

ಬುರುಡೆ ಪ್ರಕರಣದ ಸಂಬಂಧ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಎಸ್.ಐ.ಟಿ ಅಧಿಕಾರಿಗಳು ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಅಗಸ್ಟ್ 26 ರಂದು ಶೋಧ ನಡೆಸಿದಾಗ ಎರಡು ತಲವಾರು ಮತ್ತು ಒಂದು ಬಂದೂಕು ಸೇರಿ ಒಟ್ಟು 44 ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಬಳಿಕ ಎಸ್.ಐ.ಟಿ ಎಸ್ಪಿ ಸಿ.ಎ.ಸೈಮನ್ ಸೆಪ್ಟೆಂಬರ್‌ 16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಎರಡು ತಲವಾರು ಮತ್ತು ಒಂದು ಬಂದೂಕು ಎಸ್.ಐ.ಟಿ ಅಧಿಕಾರಿಗಳ ವಶದಲ್ಲಿದ್ದನ್ನು  ಬೆಳ್ತಂಗಡಿ ಪೊಲೀಸರ ಮನವಿಯಂತೆ ಬೆಳ್ತಂಗಡಿ ಪೊಲೀಸರಿಗೆ ನೀಡಿದ್ದು, ಇದೀಗ ಬೆಳ್ತಂಗಡಿ ಪೊಲೀಸರು ಬಂದೂಕು ಪರೀಕ್ಷೆಗಾಗಿ ಎಫ್ಎಸ್ಎಲ್ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

- Advertisement -

Latest News

error: Content is protected !!