Sunday, June 7, 2026
Homeಕರಾವಳಿಕುಸ್ತಿ ಫೆಡರೇಷನ್ ಆಫ್ ಇಂಡಿಯಾದ ಜಂಟಿ ಕಾರ್ಯದರ್ಶಿಯಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ

ಕುಸ್ತಿ ಫೆಡರೇಷನ್ ಆಫ್ ಇಂಡಿಯಾದ ಜಂಟಿ ಕಾರ್ಯದರ್ಶಿಯಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ

- Advertisement -
- Advertisement -

ನವದೆಹಲಿ: ಕುಸ್ತಿ ಫೆಡೆರೇಷನ್‌ ಆಫ್‌ ಇಂಡಿಯಾದ ಜಂಟಿ ಕಾರ್ಯದರ್ಶಿಯಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ನವದೆಹಲಿಯಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ಗುಣರಂಜನ್ ಶೆಟ್ಟಿ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರೂ ಆಗಿರುವ ಗುಣರಂಜನ್ ಶೆಟ್ಟಿ, ಟಾಲಿವುಡ್ ನಟಿ ಅನುಷ್ಕಾ ಶೆಟ್ಟಿ ಅವರ ಸಹೋದರರೂ ಆಗಿದ್ದಾರೆ.

ಡಬ್ಲ್ಯೂ ಎಫ್ ಐ ಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಂಜಯ್ ಕುಮಾರ್ ಸಿಂಗ್ ಆಯ್ಕೆಯಾಗಿದ್ದು, ಉಪಾಧ್ಯಕ್ಷರು, ಕಾರ್ಯದರ್ಶಿ ಮತ್ತು ಖಜಾಂಚಿ ಸೇರಿದಂತೆ ಇತರ ಹದಿನೈದು ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.

- Advertisement -

Latest News

error: Content is protected !!