Friday, June 5, 2026
Homeಕರಾವಳಿಸುಬ್ರಹ್ಮಣ್ಯ ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಪ್ರಕರಣ : ಮೃತರ ಸಂಖ್ಯೆ ಎರಡಕ್ಕೆ ಏರಿಕೆ

ಸುಬ್ರಹ್ಮಣ್ಯ ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಪ್ರಕರಣ : ಮೃತರ ಸಂಖ್ಯೆ ಎರಡಕ್ಕೆ ಏರಿಕೆ

- Advertisement -
- Advertisement -
ಸುಬ್ರಹ್ಮಣ್ಯ; ಕಿರು ಸೇತುವೆಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಡೆದಿದೆ. ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಅಪಘಾತ ಸಂಭವಿಸಿದ್ದು, ರಾಮನಗರ ನಿವಾಸಿಗಳಾದ ನಾಗೇಶ್ (27), ತೇಜಸ್ವಿನಿ (14) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಗು ಸೇರಿದಂತೆ ಇನ್ನುಳಿದ ಐವರಿಗೆ ಗಾಯಗಳಾಗಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಾಸಾಗುತ್ತಿದ್ದ ವೇಳೆ‌ ದುರ್ಘಟನೆ ನಡೆದಿದೆ. ಕಡಬ ಪೊಲೀಸ್ ಠಾಣೆಯಲ್ಲಿ‌ ಅಪಘಾತ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!