Friday, May 10, 2024
Homeಕರಾವಳಿಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ಮಲ್ಲಿಕಾ ನಿಧನ

ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ಮಲ್ಲಿಕಾ ನಿಧನ

spot_img
- Advertisement -
- Advertisement -

ಬೆಳ್ತಂಗಡಿ: ಇಲ್ಲಿನ  ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ಮಲ್ಲಿಕಾ (40ವ) ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಇಂದು ಬೆಳಗ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಅವರನ್ನು ಬೆಳ್ತಂಗಡಿಯ ಆಸ್ಪತ್ರೆಯೊಂದಕ್ಕೆ‌ ಕರೆದೊಯ್ಯಲಾಗಿತ್ತು . ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮಲ್ಲಿಕಾ ಮೃತಪಟ್ಟಿದ್ದಾರೆ.

ಪಿಲಿಚಂಡಿ ಕಲ್ಲು ನಿವಾಸಿಯಾಗಿರುವ ಇವರು,   ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು ಪತಿ, ತಂದೆ, ತಾಯಿ ಹಾಗೂ ಬಂಧು ವರ್ಗದವರನ್ನುಅಗಲಿದ್ದಾರೆ.

- Advertisement -
spot_img

Latest News

error: Content is protected !!