Thursday, June 4, 2026
Homeಕರಾವಳಿಗುರುಪುರ: ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದು ವ್ಯಕ್ತಿ ಸಾವು

ಗುರುಪುರ: ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತನ್ನದೇ ಮನೆಯ ಕಂಪೌಂಡ್ ಗೋಡೆ ಕುಸಿದು ಗುರುಪುರದ ಮಠದಗುಡ್ಡೆ ನಿವಾಸಿ ನಾರಾಯಣ ನಾಯ್ಕ (52) ಮೃತಪಟ್ಟಿದ್ದಾರೆ.

ಶುಕ್ರವಾರ ಧಾರಾಕಾರ ಮಳೆಯಾಗುತ್ತಿದ್ದುದರಿಂದ ನೀರು ಹೋಗಲು ಮನೆ ಪಕ್ಕದ ಚಿಕ್ಕ ತೋಡು ಬಿಡಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಈ ವೇಳೆ ಮಳೆಯಿಂದ ತೇವಗೊಂಡಿದ್ದ ಅವರದ್ದೇ ಮನೆಯ ಮುರಕಲ್ಲಿನ ಆಳೆತ್ತರದ ಕಂಪೌಂಡ್ ನಾರಾಯಣ ನಾಯ್ಕರ ಮೇಲೆ ಬಿದ್ದಿದೆ. ತೀವ್ರ ರಕ್ತಸ್ರಾವಗೊಂಡ ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು.

ಖಾಸಗಿ ಬಸ್ ಏಜೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಾರಾಯಣ ನಾಯ್ಕರು ಮಠದಗುಡ್ಡೆಯ ಗುಡ್ಡದಲ್ಲಿ ಈಚೆಗಷ್ಟೇ ಹೊಸ ಮನೆ ಕಟ್ಟಿದ್ದರು. ಕಲಾವಿದ ವಿ.ಜೆ. ಮಧುರಾಜ್ ಸೇರಿದಂತೆ ಇಬ್ಬರು ಮಕ್ಕಳು, ಪತ್ನಿಯೊಂದಿಗೆ ವಾಸವಾಗಿದ್ದರು.

- Advertisement -

Latest News

error: Content is protected !!