Saturday, April 27, 2024
Homeಕರಾವಳಿಮಂಗಳೂರು: ರಂಗಸ್ಥಳದಲ್ಲಿಯೇ ಕುಸಿದು ಬಿದ್ದು ಕಟೀಲು ಮೇಳದ ಹಿರಿಯ ಕಲಾವಿದ ನಿಧನ

ಮಂಗಳೂರು: ರಂಗಸ್ಥಳದಲ್ಲಿಯೇ ಕುಸಿದು ಬಿದ್ದು ಕಟೀಲು ಮೇಳದ ಹಿರಿಯ ಕಲಾವಿದ ನಿಧನ

spot_img
- Advertisement -
- Advertisement -

ಮಂಗಳೂರು; ಯಕ್ಷಗಾನದ ವೇಳೆ ರಂಗಸ್ಥಳದಲ್ಲಿಯೇ  ಕುಸಿದು ಬಿದ್ದು ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಹಿರಿಯ ಕಲಾವಿದ ಗುರುವಪ್ಪ ಬಾಯಾರು (58) ಅವರು ಗುರುವಾರ ರಾತ್ರಿ  ನಿದನರಾಗಿದ್ದಾರೆ. ಕಟೀಲಿನ ಸರಸ್ವತಿ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.

ಸರಸ್ವತಿ ಸದನದಲ್ಲಿ ಕಟೀಲು ನಾಲ್ಕನೇ ಮೇಳದ ತ್ರಿಜನ್ಮ ಮೋಕ್ಷ ಪ್ರಸಂಗದ ಯಕ್ಷಗಾನ ಬಯಲಾಟ ನಡೆಯುತ್ತಿತ್ತು. ಬಾಯಾರು ಅವರು ಶಿಶುಪಾಲನ ಪಾತ್ರ ನಿರ್ವಹಿಸಿದ್ದರು. ಪ್ರಸಂಗದ ಕೊನೆಯ ಭಾಗ ಪ್ರದರ್ಶನಗೊಳ್ಳುತ್ತಿತ್ತು. ರಂಗಸ್ಥಳದಲ್ಲಿ ನಿಂತಿದ್ದ ಗುರುವಪ್ಪ ಬಾಯಾರು ಅವರು ರಂಗಸ್ಥಳದಿಂದ ಕೆಳಗಡೆ ಬಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.

ಅಷ್ಟಮಂಗಲ ಪ್ರಸಂಗವನ್ನೂ ಬರೆದಿದ್ದ ಅವರು ಕಳೆದ ಮಳೆಗಾಲದಲ್ಲಿ ಮಂಗಳೂರು ಪುರಭವನದಲ್ಲಿ ಯಕ್ಷಗಾನವನ್ನು ಆಡಿಸಿದ್ದರು. ನಾನಾ ಮೇಳಗಳಲ್ಲಿ ತಿರುಗಾಟ ನಡೆಸಿದ್ದ ಅವರು 2013ರಲ್ಲಿ ಕಟೀಲು ಮೇಳಕ್ಕೆ ಸೇರಿದ್ದರು. ಮಧುಕೈಟಭ, ಮುಂತಾದ ಕಿರೀಟ ವೇಷಗಳನ್ನು ಮಾಡುತ್ತಿದ್ದ ಅವರಿಗೆ ಅನೇಕ ಪ್ರಶಸ್ತಿ, ಪುರಸ್ಕಾರಗಳು ಸಂದಿದ್ದವು.

- Advertisement -
spot_img

Latest News

error: Content is protected !!