Friday, May 3, 2024
Homeಕರಾವಳಿಸುಳ್ಯದ ಗುತ್ತಿಗಾರು ಪ್ರೌಢಶಾಲೆಯ 3 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಸುಳ್ಯದ ಗುತ್ತಿಗಾರು ಪ್ರೌಢಶಾಲೆಯ 3 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

spot_img
- Advertisement -
- Advertisement -

ಸುಳ್ಯ:  ಇಲ್ಲಿನ ಗುತ್ತಿಗಾರು ಸರಕಾರಿ ಪ್ರೌಢಶಾಲೆಯ ಮೂವರು ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ತಿಳಿದುಬಂದಿದೆ.

ಎಸ್ಸೆಸೆಲ್ಸಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡುತ್ತಿದ್ದ ವೇಳೆ ಮೂವರು ಸೋಂಕಿಗೆ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಇಂಟರ್ ನಲ್ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.

ಇನ್ನು  ಇತರೆ ವಿದ್ಯಾರ್ಥಿಗಳನ್ನು ಕೋವಿಡ್ ತಪಾಸಣೆಗೆ ಒಳಪಡಿಸಲು ನಿರ್ಧರಿಸಲಾಗಿದೆ. ಅದರಂತೆ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಪ್ರೌಢಶಾಲೆಗೆ ಆಗಮಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

:

- Advertisement -
spot_img

Latest News

error: Content is protected !!