Monday, April 29, 2024
Homeತಾಜಾ ಸುದ್ದಿನಿರುದ್ಯೋಗಿ ಯುವಕರಿಗೆ ಸರ್ಕಾರದಿಂದ ಗುಡ್‌ನ್ಯೂಸ್ !

ನಿರುದ್ಯೋಗಿ ಯುವಕರಿಗೆ ಸರ್ಕಾರದಿಂದ ಗುಡ್‌ನ್ಯೂಸ್ !

spot_img
- Advertisement -
- Advertisement -

ಪಂಜಾಬ್‌ನಲ್ಲಿ ಆಪ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈಗಾಗಲೇ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಅಧಿಕಾರ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ನಿರುದ್ಯೋಗ ಯುವಕರಿಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ.

ಇಂದು ನಡೆದ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 25,000 ಸರ್ಕಾರಿ ಉದ್ಯೋಗ ನೀಡುವ ಪ್ರಸ್ತಾವನೆಯನ್ನು ಅಂಗೀಕರಿಸಿರುವುದಾಗಿ ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ. ಪೊಲೀಸ್ ಇಲಾಖೆಯಲ್ಲಿ 10,000 ಮತ್ತಿತರ ಸರ್ಕಾರಿ ಇಲಾಖೆಗಳಲ್ಲಿ 15,000 ಹುದ್ದೆಗಳು ಸೇರಿ 25,000 ಸರ್ಕಾರಿ ಉದ್ಯೋಗಗಳ ಪ್ರಸ್ತಾವನೆಗೆ ಕ್ಯಾಬಿನೆಟ್ ಸಮ್ಮತಿಸಿದೆ.

ಪಂಜಾಬ್‌ನಲ್ಲಿ ಆಪ್ ಸರ್ಕಾರ ಅಧಿಕಾರಕ್ಕೆ ಬಂದ್ರೆ ಯುವಜನಾಂಗಕ್ಕೆ ಉದ್ಯೋಗ ಒದಗಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಇದೀಗ ಅದರಂತೆ ಸರ್ಕಾರಿ ಉದ್ಯೋಗ ಘೋಷಣೆ ಮಾಡಿದೆ.

- Advertisement -
spot_img

Latest News

error: Content is protected !!