Thursday, June 25, 2026
Homeತಾಜಾ ಸುದ್ದಿಚಾಮುಂಡಿ ಬೆಟ್ಟದಲ್ಲಿ ಪ್ರಜ್ವಲ್ ರೇವಣ್ಣ ಹೆಸರಲ್ಲಿ ಅರ್ಚನೆ ಮಾಡಿಸಿದ ಹೆಚ್ ಡಿ ರೇವಣ್ಣ

ಚಾಮುಂಡಿ ಬೆಟ್ಟದಲ್ಲಿ ಪ್ರಜ್ವಲ್ ರೇವಣ್ಣ ಹೆಸರಲ್ಲಿ ಅರ್ಚನೆ ಮಾಡಿಸಿದ ಹೆಚ್ ಡಿ ರೇವಣ್ಣ

- Advertisement -
- Advertisement -

ಬೆಂಗಳೂರು : ಸಂತ್ರಸ್ತೆಯ ಕಿಡ್ನ್ಯಾಪ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ನೀಡಿತ್ತು. ಇಂದು ಮಧ್ಯಾಹ್ನ ಜೈಲಿನಿಂದ ರಿಲೀಸ್ ಆದ ಬೆನ್ನಲ್ಲೇ ಹೆಚ್.ಡಿ ರೇವಣ್ಣ ಟೆಂಪಲ್ ರನ್ ನಲ್ಲಿ ತೊಡಗಿದ್ದಾರೆ.

ಜೈಲಿನಿಂದ ಹೊರ ಬಂದ ಬೆನ್ನಲ್ಲೇ ರೇವಣ್ಣ  ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಗರ್ಭಗುಡಿಯಲ್ಲಿ ಎಚ್ಡಿ ರೇವಣ್ಣ ಅವರು ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.ಈವೇಳೆ ಅವರ ಜೊತೆಗೆ ಸಾರಾ ಮಹೇಶ್, ಸಿ ಎಸ್ ಪುಟ್ಟರಾಜು, ಎಂಎಲ್ಸಿ ಮಂಜೇಗೌಡ ಸಾಥ್ ನೀಡಿದ್ದಾರೆ.

ಪುತ್ರ ಪ್ರಜ್ವಲ್ ರೇವಣ್ಣ ಹೆಸರಿನಲ್ಲಿ ಎಚ್ಡಿ ರೇವಣ್ಣ ಅರ್ಚನೆ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಕುಟುಂಬದ ಪ್ರತಿಯೊಬ್ಬರ ಹೆಸರು ನಕ್ಷತ್ರ ಹೇಳಿ ಎಚ್ಡಿ ರೇವಣ್ಣ ಅರ್ಚನೆ ಮಾಡಿಸಿದ್ದಾರೆ.ಇನ್ನು  ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಹೊರ ಬರುತ್ತಿದ್ದಂತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಪದ್ಮನಾಭ ನಗರದ ನಿವಾಸದಲ್ಲಿ ಭೇಟಿಯಾದರು. ಆ ಬಳಿಕ, ಅಲ್ಲಿನ ದೇವರ ಕೋಣೆಗೆ ತೆರಳಿ ಪೂಜೆ ಕೂಡ ನೆರವೇರಿಸಿದ್ದಾರೆ.

ಅಲ್ಲಿಂದ ಬೆಂಗಳೂರಿನ ಜೆಪಿ ನಗರದಲ್ಲಿ ಇರುವಂತ ತಿರುಮಲ ಲಕ್ಷ್ಮೀ ವೆಂಕಟೇಶ್ವರ ದೇವಾಲಯಕ್ಕೆ ತೆರಳಿದ ಅವರು, ವಿಶೇಷ ಪೂಜೆಯನ್ನು ಸಲ್ಲಿಸಿದರು. ಜೊತೆಗೆ ಕುಂಬಳಕಾಯಿ, ಈಡುಗಾಯಿ ಹೊಡೆದು ದೃಷ್ಠಿ ತೆಗೆಸಿ, ಒಬ್ಬರೇ ಪೂಜೆ ಮಾಡಿದ್ರು. ಅಲ್ಲಿಂದ ಬಸವನಗುಡಿಯಲ್ಲಿರುವಂತ ಕಾರಂಜಿ ಆಂಜನೇಯ ದೇವಸ್ಥಾನಕ್ಕೆ ತೆರಳಿದಂತ ಅವರು, ಅಲ್ಲಿಯೂ ವಿಶೇಷ ಪೂಜೆ ಸಲ್ಲಿಸಿದರು.

- Advertisement -

Latest News

error: Content is protected !!