Friday, June 5, 2026
Homeತಾಜಾ ಸುದ್ದಿಮಾಜಿ ಸಚಿವ ಹೆಚ್ ಡಿ ರೇವಣ್ಣಗೂ ಕೊರೋನಾ ಪಾಸಿಟಿವ್

ಮಾಜಿ ಸಚಿವ ಹೆಚ್ ಡಿ ರೇವಣ್ಣಗೂ ಕೊರೋನಾ ಪಾಸಿಟಿವ್

- Advertisement -
- Advertisement -

ಬೆಂಗಳೂರು : ಈಗಾಗಲೇ ಅನೇಕ ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿದ್ದಂತ ಕೊರೋನಾ, ಇದೀಗ ಮಾಜಿ ಸಚಿವ ಹೆಚ್ ಡಿ ರೇವಣ್ಣಗೂ ಶಾಕ್ ನೀಡಿದೆ. ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಆರೋಗ್ಯ ಸಚಿವ ಬಿ ಶ್ರೀರಾಮುಲು ಸೇರಿದಂತೆ ಅನೇಕ ಜನಪ್ರತನಿಧಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಬಳಿಕ ಚಿಕಿತ್ಸೆಯ ನಂತ್ರ ಕೊರೋನಾದಿಂದ ಗುಣಮುಖರಾಗಿ ಬಂದಿದ್ದರು. ಇದೀಗ ಮಾಜಿ ಸಚಿವ ಹೆಚ್ ಡಿ ರೇವಣ್ಣಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಕಳೆದ ಇತ್ತೀಚೆಗೆ ಕೊರೋನಾ ಪರೀಕ್ಷೆಗೆ ಒಳಗಾಗಿದ್ದಂತ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ತಮ್ಮ ಸಂಪರ್ಕದಲ್ಲಿರುವವರು ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

Latest News

error: Content is protected !!