Saturday, June 6, 2026
Homeತಾಜಾ ಸುದ್ದಿಮಾಜಿ ಸಚಿವ ಎಚ್.ವಿಶ್ವನಾಥ್ ಮೊಮ್ಮಗ ಅಪಘಾತದಲ್ಲಿ ಸಾವು

ಮಾಜಿ ಸಚಿವ ಎಚ್.ವಿಶ್ವನಾಥ್ ಮೊಮ್ಮಗ ಅಪಘಾತದಲ್ಲಿ ಸಾವು

- Advertisement -
- Advertisement -

ಮೈಸೂರು: ಹಳ್ಳಿ ಹಕ್ಕಿ ಖ್ಯಾತಿಯ ಮಾಜಿ ಸಚಿವ ಎಚ್.ವಿಶ್ವನಾಥ್ ಅವರ ಮೊಮ್ಮಗ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಎಚ್.ವಿಶ್ವನಾಥ್ ಅವರ ಸಹೋದರಿಯ ಮೊಮ್ಮಗ ಕಾರ್ತಿಕ್, 10 ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.

ಮೃತ ಕಾರ್ತಿಕ್

ಮೈಸೂರಿನ ಶಾರದಾದೇವಿನಗರದ ನಿವಾಸಿಯಾದ ಕಾರ್ತಿಕ್ ಅವರು ಜುಲೈ 3 ರಂದು ಬೈಕ್ ನಲ್ಲಿ ತೆರಳುತ್ತಿದ್ದಾಗ ಕುವೆಂಪುನಗರದಲ್ಲಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಗಾಯಗೊಂಡಿದ್ದರು.

ಅವರನ್ನು ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಕಳೆದ ರಾತ್ರಿ ಮೃತಪಟ್ಟಿದ್ದಾರೆ. ಕುವಂಪುನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಎಚ್.ವಿಶ್ವನಾಥ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಪಕ್ಷಕ್ಕೆ ಸೇರಿದ್ದರು.

- Advertisement -

Latest News

error: Content is protected !!