Monday, June 8, 2026
Homeಕರಾವಳಿಉಡುಪಿಮಲ್ಪೆ: ವಿಪರೀತ ಮದ್ಯಪಾನ ಸೇವನೆಯ ಅಭ್ಯಾಸದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮಹಿಳೆ ನೇಣಿಗೆ ಶರಣು !

ಮಲ್ಪೆ: ವಿಪರೀತ ಮದ್ಯಪಾನ ಸೇವನೆಯ ಅಭ್ಯಾಸದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮಹಿಳೆ ನೇಣಿಗೆ ಶರಣು !

- Advertisement -
- Advertisement -

ಮಲ್ಪೆ: ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಲಕ್ಷ್ಮೀನಗರದ ಗೀತಾ ( 52 ).

ಇವರು ವಿಪರೀತ ಶರಾಬು ಕುಡಿಯುವ ಅಭ್ಯಾಸ ಹೊಂದಿದ್ದು ಅದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಗೀತಾ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮೃತರ ಮಗಳು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Latest News

error: Content is protected !!