Thursday, June 4, 2026
HomeUncategorizedಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡದಕ್ಕೆ ಅಭಿಮಾನಿಗಳ ಆಕ್ರೋಶ: ಯಡಿಯೂರಪ್ಪ...

ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡದಕ್ಕೆ ಅಭಿಮಾನಿಗಳ ಆಕ್ರೋಶ: ಯಡಿಯೂರಪ್ಪ ನಿವಾಸದ ಬಳಿ ಶಾಸಕರ ಬೆಂಬಲಿಗರ ಹೈಡ್ರಾಮಾ..!

- Advertisement -
- Advertisement -

ಬೆಂಗಳೂರು : ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಸಚಿವ ಸ್ಥಾನ ಸಿಗದೇ ಇರೋದು ಅವರ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ  ಹಾಲಾಡಿ ಬೆಂಬಲಿಗರು ಮಾಜಿ ಸಿಎಂ ಯಡಿಯೂರಪ್ಪ ಅವರ ಕಾವೇರಿ ನಿವಾಸದ ಬಳಿ ಪ್ರತಿಭಟನೆ ನಡೆಸಿದ್ರು.

ಕುಂದಾಪುರದಿಂದ ಆಗಮಿಸಿದ ಹಾಲಾಡಿ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ರು. ಸಚಿವ ನೀಡದ್ದಕ್ಕೆ ಬೇಸರಗೊಂಡಿರುವ ಹಾಲಾಡಿ ಅಭಿಮಾನಿಗಳು ಹಾಲಾಡಿ ಅವರಿಗೆ ಸಚಿವ ಸ್ಥಾನ ನೀಡಬೇಕು ಅಂತಾ ಆಕ್ರೋಶ ಹೊರ ಹಾಕಿದ್ರು. ಕುಂದಾಪುರ ಕ್ಷೇತ್ರದಿಂದ ಸತತವಾಗಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡದೇ ಇರೋದು ಸರಿಯಲ್ಲ ಅಂತಾ ಬೇಸರ ವ್ಯಕ್ತಪಡಿಸಿದ್ರು. ಇನ್ನು ಕಳೆದ ಕೆಲವು ದಿನಗಳಿಂದ ಹಾಲಾಡಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಒತ್ತಾಯ ಕೇಳಿ ಬರುತ್ತಿತ್ತು. ಹೀಗಿರುವಾಗಲೇ ಅವರಿಗೆ ಸಚಿವ ಸ್ಥಾನ ನೀಡದೇ ಇರೋದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

- Advertisement -

Latest News

error: Content is protected !!