Wednesday, June 24, 2026
Homeಕರಾವಳಿಉಡುಪಿಉಡುಪಿ: ಚುನಾವಣಾ ನಿವೃತ್ತಿ ಘೋಷಿಸಲು ನಿರ್ಧರಿಸಿದ ಹಾಲಾಡಿ ಶ್ರೀನಿವಾಸ್ ಶೆಟ್ಟಿ

ಉಡುಪಿ: ಚುನಾವಣಾ ನಿವೃತ್ತಿ ಘೋಷಿಸಲು ನಿರ್ಧರಿಸಿದ ಹಾಲಾಡಿ ಶ್ರೀನಿವಾಸ್ ಶೆಟ್ಟಿ

- Advertisement -
- Advertisement -

ಉಡುಪಿ: ಸತತ 24 ವರ್ಷಗಳಿಂದ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿರುವ ಕುಂದಾಪುರ ಕರ್ಣ ಎಂದೇ ಹೆಸರುವಾಸಿಯಾಗಿರುವ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಇಂದು ಹಾಲಾಡಿಯ ತಮ್ಮ ಮನೆಯಲ್ಲಿ ನಡೆದ ಸಭೆಯಲ್ಲಿ ನಿವೃತ್ತಿಯ ವಿಚಾರವನ್ನು ತನ್ನ ಆಪ್ತ ಮುಂದೆ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ತನ್ನ ಆಪ್ತಮಿತ್ರ ಕಿರಣ್ ಕೊಡ್ಲಿಗೆ ಬಿಜೆಪಿ ಟಿಕೆಟ್ ನೀಡುವುದಾದರೆ ನಾನು ಪಕ್ಷದ ಪರ ಕೆಲಸ ಮಾಡಲು ಸಿದ್ಧ ಇಲ್ಲವಾದಲ್ಲಿ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ. ನನಗೆ ಯಾವುದೆ ಟಿಕೆಟ್ ಬೇಡ ಎಂದು ಹೇಳಿದ್ದಾರೆ ಅಂತಾ ಹೇಳಲಾಗುತ್ತಿದೆಯ

ಸದ್ಯ ಈ ಬೆಳವಣಿಗೆ ಉಡುಪಿ ಜಿಲ್ಲೆಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಇವರ ನಿರ್ಧಾರಕ್ಕೆ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!