- Advertisement -
- Advertisement -
ಬೆಂಗಳೂರು: ಐದು ಕೋಟಿ ವಂಚನೆಗೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಅಭಿಯನವ ಹಾಲಶ್ರೀಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದಾರೆ.
ಚಲಿಸುತ್ತಿದ್ದ ರೈಲಿನಲ್ಲಿಯೇ ಅವರನ್ನು ಬಂಧಿಸಲಾಗಿದ್ದು, ಸದ್ಯ ಅಲ್ಲಿಂದ ಪೊಲೀಸರು ಕರೆ ತರುತ್ತಿದ್ದು, ಇಂದು ರಾತ್ರಿ ಬೆಂಗಳೂರಿಗೆ ಬರುವ ಸಾಧ್ಯತೆ ಇದೇ ಎನ್ನಲಾಗಿದೆ.
ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿ ಬಂಧನಕ್ಕೊಳಗಾಗಿರುವ ಚೈತ್ರಾ ಗ್ಯಾಂಗ್‍ನ ಎ3 ಆರೋಪಿ ಅಭಿನವ ಹಾಲಶ್ರೀಯಾಗಿದ್ದಾರೆ. ಇದೇ ವೇಳೆ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರವಾಗಿ ಇಂದು (ಮಂಗಳವಾರ) ಸಿಸಿಬಿ (CCB) ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಇದೆ.
- Advertisement -