Wednesday, May 15, 2024
Homeತಾಜಾ ಸುದ್ದಿರಾಷ್ಟ್ರಕವಿ ಕುವೆಂಪು ಹಾಗೂ ನಾಡಗೀತೆಗೆ ಅಪಮಾನ: ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಂಪನಾ...

ರಾಷ್ಟ್ರಕವಿ ಕುವೆಂಪು ಹಾಗೂ ನಾಡಗೀತೆಗೆ ಅಪಮಾನ: ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಂಪನಾ 

spot_img
- Advertisement -
- Advertisement -

ಬೆಂಗಳೂರು: ರಾಜ್ಯದ ಪವಿತ್ರ ನಾಡಗೀತೆಗೆ ಅಪಮಾನವನ್ನುಂಟು ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಹಿರಿಯ ಸಾಹಿತಿ, ನಾಡೋಜ ಹಂಪ ನಾಗರಾಜಯ್ಯ ಅವರು ಇಂದು ತಮ್ಮ ಹುದ್ದೆಗೆ ರಾಜೀನಾಮೆ ಘೋಷಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರಾಗಿರುವ, ಹಿರಿಯ ಸಾಹಿತಿ ಹಂಪನಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆಯುವ ಮೂಲಕ ರಾಜೀನಾಮೆ ಘೋಷಿಸಿದ್ದು, ‘ಕುವೆಂಪುರವರನ್ನೂ, ಅವರು ಹುಟ್ಟಿದ ಗೌರವಾನ್ವಿತ ದೊಡ್ಡ ಜನಾಂಗವನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿ, ನಮ್ಮ ರಾ‍ಷ್ಟ್ರಗೀತೆಯಾದ ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳುವ ಬದಲು ಸರ್ಕಾರ ಜವಾಬ್ದಾರಿಯ ಸ್ಥಾನ ನೀಡಿದೆ. ಇದು ಅಪಾಯಕಾರಿಯಾದ ಬೆಳವಣಿಗೆ’ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ತಮ್ಮ ಅಮೂಲ್ಯ ಕೃತಿಗಳಿಂದ ಹೊಸಗನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳನ್ನೂ ಸಪ್ರಾಣಿಸಿ ಭಾರತೀಯ ಸಾಹಿತ್ಯದಲ್ಲಿ ಕನ್ನಡಕ್ಕೂ, ಕರ್ನಾಟಕಕ್ಕೂ ಮಹಾಕವಿ ಕುವೆಂಪುರವರು ಗೌರವ ತಂದರು. ಅವರು ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದ ಮೊದಲಿಗರು. ಇದನ್ನರಿತು ಸರ್ಕಾರ ‘ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ’ವನ್ನು ಪ್ರಾರಂಭಿಸಿತಲ್ಲದೆ, ಅತ್ಯುನ್ನತ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನಿತ್ತು ಗೌರವಿಸಿತು.

ಆದರೆ ಇಂದು ಕುವೆಂಪುರವರನ್ನೂ, ಅವರು ಹುಟ್ಟಿದ ಗೌರವಾನ್ವಿತ ದೊಡ್ಡ ಜನಾಂಗವನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿ, ನಮ್ಮ ರಾ‍ಷ್ಟ್ರಗೀತೆಯಾದ ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳುವ ಬದಲು ಸರ್ಕಾರ ಜವಾಬ್ದಾರಿಯ ಸ್ಥಾನ ನೀಡಿದೆ. ಇದು ಅಪಾಯಕಾರಿಯಾದ ಬೆಳವಣಿಗೆ. ಇದರಿಂದ ‘ಪುಣ್ಯಶ್ಲೋಕದ ಮೇಲೆ ಕೆಟ್ಟ ಮಾತುಗಳ ಮಳೆ ಸುರಿಸಿದರೆ ಅಂಥವರಿಗೆ ಸರ್ಕಾರದ ಸಮಿತಿಗಳಲ್ಲಿ ಸದಸ್ಯರಾಗುವ ಸದವಕಾಶಗಳಿವೆ’ ಎಂಬ ತಪ್ಪು ಸಂದೇಶ ರವಾನೆ ಮಾಡಿದಂತಾಗಿದೆ. ವ್ಯಕ್ತಿಗಳ ತೇಜೋವಧೆ ಮಾಡುವುದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂಬ ನಂಬಿಕೆ ಹುಸಿಯಾಗಿದೆ.

ರಾಷ್ಟ್ರಕವಿ ಕುವೆಂಪುರವರನ್ನೂ, ನಮ್ಮ ಪವಿತ್ರ ನಾಡಗೀತೆಯನ್ನೂ ಅಪಮಾನಿಸುತ್ತಿದ್ದರೂ ನೋಡಿಕೊಂಡು ತೆಪ್ಪಗಿರುವುದು ನನಗೆ ಕಷ್ಟವಾಗಿದೆ. ಸರ್ಕಾರ ಸ್ಥಾಪಿಸಿರುವ ಕುವೆಂಪು ಅಧ್ಯಕ್ಷ ಸ್ಥಾನಕ್ಕೂ ಸದಸ್ಯತ್ವಕ್ಕೂ ನನ್ನ ರಾಜೀನಾಮೆಯನ್ನು ಮಾನ್ಯ ಮುಖ್ಯಮಂತ್ರಿಗಳು ಅಂಗೀಕರಿಸಬೇಕೆಂದು ಪ್ರಾರ್ಥಿಸುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.

- Advertisement -
spot_img

Latest News

error: Content is protected !!