Thursday, June 4, 2026
Homeಮನರಂಜನೆಬಿಗ್ ಬಾಸ್ ಕನ್ನಡ ಸೀಸನ್ 11ರ ಟ್ರೋಫಿ ಮುಡಿಗೇರಿಸಿಕೊಂಡ ಹನುಮಂತು

ಬಿಗ್ ಬಾಸ್ ಕನ್ನಡ ಸೀಸನ್ 11ರ ಟ್ರೋಫಿ ಮುಡಿಗೇರಿಸಿಕೊಂಡ ಹನುಮಂತು

- Advertisement -
- Advertisement -

ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಯಾರು ಅನ್ನೋ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹಳ್ಳಿ ಹೈದ ಹಾವೇರಿಯ ಕುವರ ಹನುಮಂತು ಬಿಗ್ ಬಾಸ್ ಟ್ರೋಫಿ ಎತ್ತಿ ಹಿಡಿದಿದ್ದಾರೆ.

ತ್ರಿವಿಕ್ರಮ್ ಮತ್ತು ರಜತ್‌ ಅವರನ್ನು ಹಿಂದಿಕ್ಕೆ ಹಳ್ಳಿ ಹೈದ ಕಪ್ ಗೆ ಮುತ್ತಿಟ್ಟಿದ್ದಾರೆ.  ಹನುಮಂತು ಕಪ್ ಜೊತೆಗೆ 50 ಲಕ್ಷ ರೂ ನಗದು ಬಹುಮಾನ ಕೂಡ ಗೆದ್ದಿದ್ದಾರೆ. ಇನ್ನು  ತ್ರಿವಿಕ್ರಮ್‌ ಅವರು ಫಸ್ಟ್ ರನ್ನರ್ ಅಪ್‌ ಆಗಿ ಒಟ್ಟು 15 ಲಕ್ಷ ರೂ ನಗದು ಬಹುಮಾನ ಗೆದ್ದಿದ್ದಾರೆ. ಹನುಮಂತ ಅವರಿಗೆ 5 ಕೋಟಿ 23 ಲಕ್ಷಕ್ಕೂ ಅಧಿಕ ವೋಟ್‌ ಬಂದಿತ್ತು. ರನ್ನರ್‌ ಅಪ್ ತ್ರಿವಿಕ್ರಮ್‌ ಗೆ 2 ಕೋಟಿ ಗೂ ಅಧಿಕ ವೋಟ್ ಬಂದಿತ್ತು. ಇದು ಸೀಸನ್‌ 10ರಲ್ಲಿ ಸ್ಪರ್ಧಿಗಳಿಗೆ ಸಿಕ್ಕ ವೋಟಿಂಗ್‌ಗಿಂತ ಎರಡು ಪಟ್ಟು ಹೆಚ್ಚು.  ರಜತ್‌ ಕಿಶನ್‌ ಅವರು ಎರಡನೇ ರನ್ನರ್ ಅಪ್ ಆದರು. ಜೊತೆಗೆ 10 ಲಕ್ಷ ರೂ ನಗದು ಬಹುಮಾನ ಗೆದ್ದಿದ್ದಾರೆ.

- Advertisement -

Latest News

error: Content is protected !!