Wednesday, June 24, 2026
Homeಕರಾವಳಿನಾಯಿಯನ್ನು ಬೈಕ್ ಗೆ ಕಟ್ಟಿ ಎಳೆದ ಪ್ರಕರಣ: ಓರ್ವ ಆರೋಪಿಯನ್ನು ಬಂಧಿಸಿದ ಮಂಗಳೂರು ಪೊಲೀಸರು

ನಾಯಿಯನ್ನು ಬೈಕ್ ಗೆ ಕಟ್ಟಿ ಎಳೆದ ಪ್ರಕರಣ: ಓರ್ವ ಆರೋಪಿಯನ್ನು ಬಂಧಿಸಿದ ಮಂಗಳೂರು ಪೊಲೀಸರು

- Advertisement -
- Advertisement -

ಮಂಗಳೂರು: ನಾಯಿಯನ್ನು ಬೈಕ್ ಗೆ ಕಟ್ಟಿ ಎಳೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕೊಪ್ಪಳದ ನಿವಾಸಿ ನೀಲಪ್ಪ ಬಂಧಿತ ಆರೋಪಿ.

ಎಪ್ರಿಲ್ 15ರಂದು ರಾತ್ರಿ ಸುಮಾರು 8.30ಕ್ಕೆ ಬೈಕ್‌ನ ಹಿಂದೆ ಹಗ್ಗದಲ್ಲಿ ನಾಯಿಯನ್ನು ಕಟ್ಟಿ ಇಬ್ಬರು ಸಾಗುತ್ತಿದ್ದರು. ಅದರ ಹಿಂದೆಯೇ ಇನ್ನೊಂದು ನಾಯಿಕೂಡಾ ಸ್ವಲ್ಪ ದೂರ ಓಡೋಡಿ ಬಂದಿದೆ. ಚಿತ್ರೀಕರಿಸಿದವರು ಹೈವೇಯಲ್ಲಿ ಇದ್ದರೆ ದುಷ್ಕರ್ಮಿಗಳು ಸರ್ವಿಸ್ ರಸ್ತೆಯಲ್ಲಿದ್ದರು. ಕೆಲ ಹೊತ್ತಿನಲ್ಲೇ ಸೇತುವೆ ಬಂದ ಕಾರಣ ಆರೋಪಿಗಳು ತಪ್ಪಿಸಿಕೊಂಡಿದ್ದರು. ಈ ನಡುವೆ ಸಾಮಾಜಿಕ ಕಾರ್ಯಕರ್ತರೊಬ್ಬರು ಪ್ರಕರಣದ ಬಗ್ಗೆ ಸುರತ್ಕಲ್ ಪೊಲೀಸರಿಗೆ ದೂರು ನೀಡಿದ್ದರು. ಡಿಸಿಪಿ ಹರಿರಾಂ ಶಂಕರ್ ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು.

ಇದೀಗ ತನಿಖೆ ಆರಂಭಿಸಿದ ಪೊಲೀಸರು ಕೊಪ್ಪಳ ಮೂಲದ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿನನ್ನು ಕೊಪ್ಪಳದ ನಿವಾಸಿ ನೀಲಪ್ಪ ಎಂದು ಗುರುತಿಸಲಾಗಿದೆ. ಇನ್ನೋರ್ವ ತಪ್ಪಿಸಿಕೊಂಡಿದ್ದಾನೆ. ನಾಯಿಯನ್ನು ಬೈಕ್ ಗೆ ಕಟ್ಟಿ ಎಳೆದೊಯ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ

- Advertisement -

Latest News

error: Content is protected !!