Friday, August 21, 2026
Homeಕರಾವಳಿಬಸ್ ನಲ್ಲಿ ಯುವತಿಗೆ ಕಿರುಕುಳ ನೀಡಿದ ಯುವಕ : ಆರೋಪಿಯನ್ನು ರೆಡ್ ಹ್ಯಾಂಡಾಗಿ ಹಿಡಿದ...

ಬಸ್ ನಲ್ಲಿ ಯುವತಿಗೆ ಕಿರುಕುಳ ನೀಡಿದ ಯುವಕ : ಆರೋಪಿಯನ್ನು ರೆಡ್ ಹ್ಯಾಂಡಾಗಿ ಹಿಡಿದ ಸಾರ್ವಜನಿಕರು

- Advertisement -
- Advertisement -

ಪುತ್ತೂರು: ಬಸ್ ನಲ್ಲಿ ಯುವತಿಯೊಬ್ಬಳಿಗೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಸಾರ್ವಜನಿಕರೇ ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಪುತ್ತೂರಿನ ಗಡಿಪಿಲ ಎಂಬಲ್ಲಿ ನಡೆದಿದೆ.

ಆರೋಪಿಯನ್ನು ಪುತ್ತೂರಿನ ಬಸ್ ನಿಲ್ದಾಣದ ಬಳಿ ಅಂಗಡಿ ಹೊಂದಿರುವ ಬೆಟ್ಟಂಪಾಡಿಯ ನೌಫಲ್ ಎಂದು ಗುರುತಿಸಲಾಗಿದೆ.

ನಿನ್ನೆ ಸಂಜೆ ಸವಣೂರು ಮೂಲಕ ಕಡಬ ಹೋಗುತ್ತಿದ್ದ ಬಸ್ ಹತ್ತಿದ್ದ ನೌಫಲ್ ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಖಾಸಗಿ ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯೋರ್ವರ ಜೊತೆ ಅಸಭ್ಯವಾಗಿ ವರ್ತಿಸಿದ್ದ.ಈ ವಿಷಯ ತಿಳಿದು ಸಂಘಟನೆಯೊಂದರ ಕಾರ್ಯಕರ್ತರು ಬಸ್ ಗಡಿಪ್ಪಿಲ ತಲುಪುತ್ತಿದ್ದಂತೆ ಬಸ್ ಅನ್ನು ನಿಲ್ಲಿಸಿ ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಯುವತಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!