Friday, June 5, 2026
Homeಕರಾವಳಿಕಡಬದಲ್ಲಿ 14 ವರ್ಷದ ಬಾಲಕಿಯ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ: ಬಾಲಕಿ ಈಗ 7 ತಿಂಗಳ ಗರ್ಭಿಣಿ

ಕಡಬದಲ್ಲಿ 14 ವರ್ಷದ ಬಾಲಕಿಯ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ: ಬಾಲಕಿ ಈಗ 7 ತಿಂಗಳ ಗರ್ಭಿಣಿ

- Advertisement -
- Advertisement -

 ಕಡಬ:   ಅಪ್ರಾಪ್ತ ಬಾಲಕಿ ಮೇಲೆ ಸಂಬಂಧಿಯೇ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಿರುವ ಘಟನೆ  ಕಡಬದಲ್ಲಿ ನಡೆದಿದೆ.

ಇಲ್ಲಿನ  ಆತೂರು ಸಮೀಪದ 14ರ ಹರೆಯದ ಬಾಲಕಿಯ ಮೇಲೆ ಆಕೆಯ ಸಂಬಂಧಿ ಸಕಲೇಶಪುರ ನಿವಾಸಿ ಶೇಖರ್ ಎಂಬಾತ ಅತ್ಯಾಚಾರಗೈದಿದ್ದಾನೆ ಎನ್ನಲಾಗಿದೆ. ಬಾಲಕಿಯನ್ನು ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಒಳಪಡಿಸಿದಾಗ ಬಾಲಕಿಯು ಏಳು ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿದೆ.

 ಈ ಬಗ್ಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಡಬ ಠಾಣೆಗೆ ದೂರು ನೀಡಿದ್ದು, ಕಡಬ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!