Thursday, May 16, 2024
Homeಕರಾವಳಿವಿಟ್ಲದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಫೋಟೋ ತೆಗೆದು ಬ್ಲ್ಯಾಕ್ ಮೇಲ್ ಮಾಡಿದ ಯುವಕರು: ಇಬ್ಬರು ಕಾಮುಕರ...

ವಿಟ್ಲದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಫೋಟೋ ತೆಗೆದು ಬ್ಲ್ಯಾಕ್ ಮೇಲ್ ಮಾಡಿದ ಯುವಕರು: ಇಬ್ಬರು ಕಾಮುಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

spot_img
- Advertisement -
- Advertisement -

ವಿಟ್ಲ: ಇಬ್ಬರು ಯುವಕರು  ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬಳಿಕ ಅಶ್ಲೀಲ ಫೋಟೋಗಳನ್ನು ತೆಗೆದು ಬಹಿರಂಗ ಪಡಿಸುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ವಿಟ್ಲದ ಬೋಳಂತೂರು ಗ್ರಾಮದಲ್ಲಿ ನಡೆದಿದೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇನ್ನು ಬೋಳಂತೂರು ಗ್ರಾಮದ ಅಬೂಬಕ್ಕರ್‌ ಸಿದ್ದಿಕ್‌ ಹಾಗೂ  ಚಪ್ಪಿ ಆರೋಪಿಗಳು. 

ಆರೋಪಿಗಳು ಸಂತ್ರಸ್ತೆ ಬಾಲಕಿ ಅಂಗಳಕ್ಕೆ ಬಂದಾಗ ಆಕೆಯನ್ನು  ಪುಸಲಾಯಿಸಿ, ಲೈಂಗಿಕ ದೌರ್ಜನ್ಯ ನಡೆಸಿ, ಬಾಲಕಿಯ ನಗ್ನ ಪೋಟೋಗಳನ್ನು ತೆಗೆದಿದ್ದರು. ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ತಮ್ಮ ಮೊಬೈಲ್‌ನಲ್ಲಿರುವ ಬೆತ್ತಲೆ ಪೋಟೋಗಳನ್ನು ಬೇರೆಯವರಿಗೆ ಕಳುಹಿಸುವುದಾಗಿ ಬೆದರಿಸಿದ್ದಲ್ಲದೆ ಮತ್ತೆ ಮತ್ತೆ ಪೀಡಿಸುತ್ತಿದ್ದರೆನ್ನಲಾಗಿದೆ.

ಆರೋಪಿಗಳ‌ ಕಿರುಕುಳಕ್ಕೆ ಬೇಸತ್ತ ಬಾಲಕಿಯ ಮನೆಯವರು ಕೊನೆಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಆರೋಪಿಗಳ ವಿರುದ್ಧ‌ ಪೋಕ್ಸೋ‌ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ..

- Advertisement -
spot_img

Latest News

error: Content is protected !!