Friday, June 5, 2026
Homeಕರಾವಳಿಅಪ್ರಾಪ್ತೆಗೆ ಲೈಂಗಿಕ ಕಿರುಕುಳ : ಮಂಗಳೂರಿನಲ್ಲಿ ಆರೋಪಿಯ ಬಂಧನ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ : ಮಂಗಳೂರಿನಲ್ಲಿ ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನಲ್ಲಿ ಅಬ್ದುಲ್ ರಾಝೀಕ್ ಉಳ್ಳಾಲ (44) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ನಂದಿಗುಡ್ಡೆಯ ಫ್ಲ್ಯಾಟ್ ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈಗಾಗಲೇ ಇಬ್ಬರು ಬಾಲಕಿಯರು ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಒಟ್ಟು 10 ಪ್ರಕರಣಗಳನ್ನು ದಾಖಲು ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 16 ಮಂದಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳೆಲ್ಲರೂ ನ್ಯಾಯಾಂಗ ಬಂಧನದಲ್ಲಿರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!