Monday, June 30, 2025
Homeಕರಾವಳಿಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಹರಿಕೃಷ್ಣ ಬಂಟ್ವಾಳ್ ಅವರಿಗೆ ಅಭಿನಂದನೆ

ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಹರಿಕೃಷ್ಣ ಬಂಟ್ವಾಳ್ ಅವರಿಗೆ ಅಭಿನಂದನೆ

spot_img
- Advertisement -
- Advertisement -

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಹರಿಕೃಷ್ಣ ಬಂಟ್ವಾಳ ಅವರನ್ನು ಕಿಯೋನಿಕ್ಸ್ ಅಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅಭಿನಂದಿಸಲಾಯಿತು. ಜನಾರ್ಧನ ಪೂಜಾರಿ ಭೇಟಿಯ ಬಳಿಕ ಹರಿಕೃಷ್ಣ ಬಂಟ್ವಾಳ್ ಬಿ.ಸಿ.ರೋಡ್​​ನ ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಬಳಿಕ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ನಾರಾಯಣ ಗುರು ಸಭಾಭವನದಲ್ಲಿ ಸಂಘದ ಅಧ್ಯಕ್ಷ ಕೆ ಸೇಸಪ್ಪ ಕೋಟ್ಯಾನ್ ಅವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭ ಮಾತನಾಡಿದ ಹರಿಕೃಷ್ಣ ಬಂಟ್ವಾಳ್, ಯುವಕರಲ್ಲಿ ದುಡಿಯುವ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಮ್ಮ ಜಿಲ್ಲೆಯ ವಿದ್ಯಾವಂತ ಯುವಕರಿಗೆ ಕಿಯೋನಿಕ್ಸ್ ಸಂಸ್ಥೆಯ ಮೂಲಕ ಉದ್ಯೋಗದ ಅವಕಾಶವನ್ನು ಸೃಷ್ಟಿಸುವ ಚಿಂತನೆಯಿದೆ. ಆ ಮೂಲಕ ಯುವಕರ ಬದುಕಿಗೆ ಬೆಳಕು ನೀಡುವ ಯೋಜನೆ ರೂಪಿಸುವುದಾಗಿ ತಿಳಿಸಿದರು.

- Advertisement -
spot_img

Latest News

error: Content is protected !!