Saturday, June 27, 2026
Homeಕರಾವಳಿಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ

- Advertisement -
- Advertisement -

ಬಂಟ್ವಾಳ : ಬಿಜೆಪಿಯ ದ.ಕ. ಜಿಲ್ಲಾ ಉಪಾಧ್ಯಕ್ಷ, ಬಿಲ್ಲವ ಸಮಾಜ ಮುಖಂಡ ಕೆ. ಹರಿಕೃಷ್ಣ ಬಂಟ್ವಾಳ ಅವರು ಕಿಯೋನಿಕ್ಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಅವರನ್ನು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಅಧ್ಯಕ್ಷರ ಹುದ್ದೆಗೆ ನೇಮಿಸಲಾಗಿದೆ.

ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನ ಕಾರ್ಯದರ್ಶಿ ಸಿದ್ರಾಮಪ್ಪ ತಳವಾರ ಅವರು ಸರ್ಕಾರದ ಪರವಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಜೂನ್ 12ರಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

- Advertisement -

Latest News

error: Content is protected !!