Wednesday, May 1, 2024
Homeಕರಾವಳಿಬಿಜೆಪಿ ತೆಕ್ಕೆಗೆ ಮೇಲಂತಬೆಟ್ಟು ಗ್ರಾಮ ಪಂಚಾಯತ್: ಅಧ್ಯಕ್ಷರಾಗಿ ಹರಿಣಾಕ್ಷಿ, ಉಪಾಧ್ಯಕ್ಷರಾಗಿ ಸವಿತಾ ಆಯ್ಕೆ

ಬಿಜೆಪಿ ತೆಕ್ಕೆಗೆ ಮೇಲಂತಬೆಟ್ಟು ಗ್ರಾಮ ಪಂಚಾಯತ್: ಅಧ್ಯಕ್ಷರಾಗಿ ಹರಿಣಾಕ್ಷಿ, ಉಪಾಧ್ಯಕ್ಷರಾಗಿ ಸವಿತಾ ಆಯ್ಕೆ

spot_img
- Advertisement -
- Advertisement -

ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾ. ಪಂ ನ ನೂತನ ಅಧ್ಯಕ್ಷೆಯಾಗಿ ಹರಿಣಾಕ್ಷಿ, ಉಪಾಧ್ಯಕ್ಷರಾಗಿ ಶ್ರೀಮತಿ ಸವಿತಾ ಮುಂಡೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮೇಲಂತಬೆಟ್ಟು ಗ್ರಾ.ಪಂನ 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 10 ಸ್ಥಾನವನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಕಾಂಗ್ರೆಸ್ ಬೆಂಬಲಿತರು ಕೇವಲ 2 ಸ್ಥಾನವನ್ನಷ್ಟೇ ಪಡೆಯುವಲ್ಲಿ ಸಫಲರಾಗಿದ್ದರು. ಮೇಲಂತಬೆಟ್ಟು ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದ ಹರಿಣಾಕ್ಷಿ ಪ.ಜಾತಿ ಮಹಿಳಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿ ಅಧ್ಯಕ್ಷರಾಗಿ ಹಾಗೂ ಮುಂಡೂರು ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದ ಶ್ರೀಮತಿ ಸವಿತಾ ಹಿಂದುಳಿದ ವರ್ಗ ಎ ಮಹಿಳಾ ಮೀಸಲಾತಿಯಲ್ಲಿ ನಾಮಪತ್ರ ಸಲ್ಲಿಸಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ತಾ.ಪಂ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ತಾರಕೇಸರಿ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ, ಕಾರ್ಯದರ್ಶಿ ನಿರ್ಮಲ್ ಕುಮಾರ್, ಗ್ರಾ.ಪಂ ನೂತನ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!