Monday, June 29, 2026
Homeಕರಾವಳಿಬೆಳ್ತಂಗಡಿ: SSLC ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಬಂದ ವಿದ್ಯಾರ್ಥಿನಿಗೆ ಹರೀಶ್ ಕುಮಾರ್ ವತಿಯಿಂದ ಸನ್ಮಾನ

ಬೆಳ್ತಂಗಡಿ: SSLC ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಬಂದ ವಿದ್ಯಾರ್ಥಿನಿಗೆ ಹರೀಶ್ ಕುಮಾರ್ ವತಿಯಿಂದ ಸನ್ಮಾನ

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿ ಶಾಲಾ ನಿವಾಸಿ ಬೆಳ್ತಂಗಡಿಯ ಖ್ಯಾತ ಎಲುಬು ತೃಜ್ಞ ಡಾ. ಶಶಿಕಾಂತ್ ಡೋಂಗ್ರೆ ಹಾಗೂ ಡಾ.ದೀಪಾಲಿ ಡೋಂಗ್ರೆ ದಂಪತಿಯ ಪುತ್ರಿ ಶ್ರೇಯಾ ಡೋಂಗ್ರೆ ಬೆಳ್ತಂಗಡಿ ತಾಲೂಕಿನಲ್ಲಿ ಇತ್ತೀಚೆಗೆ ನಡೆದ SSLC ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದರು.

ಈ ಮೂಲಕ ಲಾಯಿಲ ಸೈಂಟ್ ಮೇರೀಸ್ ಶಾಲೆಗೆ ಹಾಗೂ ತಾಲೂಕಿಗೆ ಹೆಮ್ಮೆಯ ಗರಿಯನ್ನು ತಂದುಕೊಟ್ಟ ಪ್ರತಿಭಾವಂತ ವಿದ್ಯಾರ್ಥಿನಿಯ ಮನೆಗೆ ತೆರಳಿ ವಿಧಾನ ಪರಿಷತ್ ಸದಸ್ಯ ಮತ್ತು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ ನೀಡಿ ಅಭಿನಂದಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ತಾಲೂಕು ಯುವ ಕಾಂಗ್ರೆಸ್ ನ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!