- Advertisement -
- Advertisement -
ಬೆಳ್ತಂಗಡಿ : ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜ ಸೂಚಿಸಿದ್ದಾರೆ. ಅಲ್ಲದೇ ಗರಿಷ್ಠ ಮೊತ್ತ ರೂ.25 ಲಕ್ಷ ಪರಿಹಾರ ನೀಡುವಂತೆ ಸರಕಾರಕ್ಕೆ ಆಗ್ರಹಿಸಿದ್ದಾರೆ.
ಇಲಾಖೆ ಕೂಡಲೇ 5 ಲಕ್ಷ ಪರಿಹಾರ ಘೋಷಿಸಿದ್ದು ಹೆಚ್ಚಿನ ಪರಿಹಾರಕ್ಕೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಮಳೆಗಾಲದ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮೆಸ್ಕಾಂಗೆ ಶಾಸಕರು ಸೂಚಿಸಿದ್ದಾರೆ.
- Advertisement -