Sunday, June 16, 2024
Homeಕರಾವಳಿಬೆಂಗಳೂರಿನತ್ತ ಹೊರಟ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬೆಂಗಳೂರಿನತ್ತ ಹೊರಟ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

spot_img
- Advertisement -
- Advertisement -

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಇದೀಗ ಎರಡು ಪ್ರಕರಣದ ಜಾಮೀನು ಪಡೆಯಲು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಜಾಮೀನು ಸಲ್ಲಿಸಲು ಅವರು ಬೆಂಗಳೂರಿಗೆ ತೆರಳುತ್ತಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಹೈಕೋರ್ಟ್ ವಕೀಲರಾದ ಅರುಣ್ ಶ್ಯಾಮ್ ಅವರು ಹರೀಶ್ ಪೂಂಜ ಪರವಾಗಿ ಜಾಮೀನು ಅರ್ಜಿ ಸಲ್ಲಿಸಲ್ಲಿದ್ದಾರೆ. ಈ ಹಿನ್ನೆಲೆ ಬೆಂಗಳೂರಿಗೆ ಹೋಗುತ್ತಿದ್ದಾರೆ.

ಪೂಂಜ ನಿನ್ನೆ ರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿ ತನಿಖೆಯ ಬಳಿಕ ಠಾಣಾ ಜಾಮೀನಿನಲ್ಲಿ ಬಿಡುಗಡೆ ಯಾಗಿದ್ದರು. ಅಲ್ಲದೇ ಮತ್ತೆ ವಿಚಾರಣೆಗೆ ಹಾಜರಾಗಲು 5 ದಿನ ಕಾಲಾವಕಾಶ ಕೇಳಿದ್ದರು. ಇದೀಗ ಬೆಂಗಳೂರಿಗೆ ತೆರಳಿದ್ದಾರೆ.ಇನ್ನು ಬೆಳ್ತಂಗಡಿ ಪೊಲೀಸರ ಮೇಲೂ ಹರೀಶ್ ಪೂಂಜ ಪ್ರಕರಣ ದಾಖಲಾಯಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!